LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಚಿತ್ರಸಂತೆಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ

Advertisement
ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿ 22 ನೇ ಚಿತ್ರಸಂತೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿದರು.

ದೇಶದ ವಿವಿಧ ಭಾಗಗಳಿಂದ 1,500 ಕಲಾವಿದರು ಇಂದು ನಡೆದ ಚಿತ್ರಸಂತೆಯಲ್ಲಿ ಭಾಗವಹಿಸಿ, ಕಲಾಕೃತಿಗಳನ್ನು ಪ್ರದರ್ಶಿಸಿದ್ದಾರೆ. ಕರ್ನಾಟಕದ ಜತೆಗೆ ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಗೋವಾ, ಮಹಾರಾಷ್ಟ್ರ, ಪಂಜಾಬ್, ಪಶ್ಚಿಮ ಬಂಗಾಳ, ಒಡಿಶಾ ಸೇರಿದಂತೆ ವಿವಿಧ ರಾಜ್ಯಗಳ ಕಲಾವಿದರು ಪಾಲ್ಗೊಂಡಿದ್ದು, ಕಲಾವಿದರ‌ ಕುಂಚ ಅಥವಾ ಪೆನ್ಸಿಲ್‌ಗಳಿಂದ ರಚಿಸಿದ ಚಿತ್ರಳನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ವೀಕ್ಷಿಸಿ ಕಲಾವಿದರನ್ನು ಪ್ರೋತ್ಸಾಹಿಸಿದರು.

ಮೈಸೂರು ಮತ್ತು ತಂಜಾವೂರು ಶೈಲಿಯ ಪರಂಪರೆಯ ಚಿತ್ರಕಲೆ, ರಾಜಸ್ಥಾನಿ, ಮಧುಬನಿ ಶೈಲಿಯ ಕಲಾಕೃತಿಗಳು ಹಾಗೂ ಜಲವರ್ಣ, ತೈಲವರ್ಣ, ಅಕ್ರಿಲಿಕ್‌, ಪೆನ್ಸಿಲ್‌, ಮಷಿ ರೇಖಾಚಿತ್ರಗಳು, ಗ್ರಾಫಿಕ್‌ ಮಾಧ್ಯಮ ಕೃತಿಗಳು ಸೇರಿದಂತೆ ವಿವಿಧ ಪರಂಪರೆಯ ಆಧುನಿಕ ಮತ್ತು ಸಮಕಾಲೀನ ಶೈಲಿಯ ಕಲಾಕೃತಿಗಳು ಚಿತ್ರಸಂತೆಯಲ್ಲಿ  ಸಾರ್ವಜನಿಕರ  ಗಮನ ಸೆಳೆದವು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಂ.ಸಿ. ವೇಣುಗೋಪಾಲ ಅವರು‌ ಸಚಿವರ ಜೊತೆಗಿದ್ದರು.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST