LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ನಾಳೆ ಸಿಎಲ್ಪಿ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ : ಮೌನ ಮುರಿದ ಡಿ.ಕೆ ಶಿವಕುಮಾರ್ 

Advertisement

ನವದೆಹಲಿ: ಹೈಕಮಾಂಡ್ ನಾಯಕರ ಮ್ಯಾರಥಾನ್ ಮೀಟಿಂಗ್, ಸಿದ್ದರಾಮಯ್ಯ ರಾಜೀನಾಮೆ ಈ ಎಲ್ಲಾ ಬೆಳವಣಿಗೆ ನಡುವೆ ಕಳೆದ 2-3 ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿ.ಕೆ. ಶಿವಕುಮಾರ್ ಕೊನೆಗೂ ಮೌನ ಮುರಿದಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಸಹ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಹೊಸ ಸಚಿವ ಸಂಪುಟದ ಬಗ್ಗೆ ಚರ್ಚೆ ನಡೆಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

ನಾಳೆ ಮೇ 30ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಹೈಕಮಾಂಡ್ ನಾಯಕರು ವೀಕ್ಷಕರಾಗಿ ಬರಲಿದ್ದಾರೆ. ಹೀಗಾಗಿ ಯಾವುದೇ ಶಾಸಕರು ದೆಹಲಿಗೆ ಬರಬೇಡಿ ಎಂದು ಹೇಳಿದ್ದೇವೆ.

ಕೆಲ ವಿಚಾರಗಳನ್ನ ಸಿದ್ದರಾಮಯ್ಯನವರ ಜೊತೆ ನಾವು ಚರ್ಚೆ ಮಾಡಿದ್ದೇವೆ. ಸಿಎಲ್ ಪಿ ಸಭೆ ಬಳಿಕ ಪ್ರಮಾಣ ವಚನಕ್ಕೆ ದಿನ ನಿಗಧಿಯಾಗಲಿದೆ ಎಂದು ಸ್ಪಷ್ಟಪಡಿಸಿದರು.

ಸಿಎಲ್ ಪಿ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಅಧಿಕೃತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಸಿದ್ದರಾಮಯ್ಯ ಅವರಿಂದಲೇ ಹೆಸರು ಪ್ರಾಸ್ತಾವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ