LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

56,432 ಹುದ್ದೆಗಳ ಭರ್ತಿ ಪ್ರಕ್ರಿಯೆ ಪೂರ್ಣಗೊಳಿಸಿ : ಡಿ.ಕೆ. ಶಿವಕುಮಾರ್ ಆದೇಶ 

Advertisement

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅವಧಿಯಲ್ಲಿ ಘೋಷಿಸಲಾಗಿದ್ದ 56,432 ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆದೇಶಿಸಿದ್ದಾರೆ. 

ಜೂನ್ 3, 2026 ರಂದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರು, ತಮ್ಮ ಮೊದಲ ಸಚಿವ ಸಂಪುಟ ಸಭೆಯ ನಂತರ ಈ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ.

ಮುಖ್ಯಮಂತ್ರಿಯಾದ ನಂತರ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇಳಾಪಟ್ಟಿಯನ್ನು ಸಿದ್ಧಪಡಿಸಿ ಪ್ರಕಟಿಸುವಂತೆ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ನಿರುದ್ಯೋಗ ಸಮಸ್ಯೆ ನಿವಾರಣೆ: ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವುದು ತಮ್ಮ ಸರ್ಕಾರದ ಮೊದಲ ಗುರಿಯಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

 ಈ ಹಿಂದೆ ಹುದ್ದೆಗಳ ಭರ್ತಿಗೆ ಇದ್ದ ತಾಂತ್ರಿಕ ಮತ್ತು ಕಾನೂನು ತೊಡಕುಗಳನ್ನು ನಿವಾರಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವೇಳಾಪಟ್ಟಿ ಬಿಡುಗಡೆ: ಬಾಕಿ ಇರುವ ಈ 56,432 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಮುಂದಿನ ಸಚಿವ ಸಂಪುಟ ಸಭೆಯ ಒಳಗೆ ಎಲ್ಲಾ ಇಲಾಖೆಗಳೊಂದಿಗೆ ಚರ್ಚಿಸಿ, ನೇಮಕಾತಿ ಅಧಿಸೂಚನೆಗಳು ಯಾವಾಗ ಹೊರಡುತ್ತವೆ ಮತ್ತು ಪ್ರಕ್ರಿಯೆ ಹೇಗೆ ಪ್ರಾರಂಭವಾಗುತ್ತದೆ ಎಂಬುದನ್ನು ವಿವರಿಸುವ ‘ಕ್ಯಾಲೆಂಡರ್ ಆಫ್ ಈವೆಂಟ್ಸ್’ (ವೇಳಾಪಟ್ಟಿ) ಬಿಡುಗಡೆ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST