LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 

Advertisement

ಕಲಬುರ್ಗಿ : ಕಲಬುರಗಿ ಡಿಪೋ-2ರ ಕಲಬುರಗಿ-ಹರವಾಳ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ನಿರ್ವಾಹಕರಾದ ಮಲ್ಲಯ್ಯ ಸ್ವಾಮಿ ಅವರು ಕರ್ತವ್ಯದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಜೇವರ್ಗಿಯಿಂದ ಹರವಾಳ ಕಡೆಗೆ ಬಸ್ ತೆರಳುತ್ತಿದ್ದ ಸಂದರ್ಭದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕ‌ರ್ ವೃತ್ತದ ಸಮೀಪ ಮಲ್ಲಯ್ಯ ಸ್ವಾಮಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ.

ಕೂಡಲೇ ಬಸ್ ನಿಲ್ಲಿಸಿ ಅವರನ್ನು ಜೇವರ್ಗಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಆದರೆ ವೈದ್ಯರು ಪರೀಕ್ಷಿಸಿದ ವೇಳೆ ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಮೃತ ಮಲ್ಲಯ್ಯ ಸ್ವಾಮಿ ಅವರು ಜೇವರ್ಗಿ ತಾಲೂಕಿನ ರಾಜವಾಳ ಗ್ರಾಮದ ನಿವಾಸಿಯಾಗಿದ್ದರು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜೇವರ್ಗಿ ಡಿಪೋ-2ರ ವ್ಯವಸ್ಥಾಪಕ ಕೃಷ್ಣ ಹಾಗೂ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಲ್ಲಯ್ಯ ಸ್ವಾಮಿ ಅವರ ನಿಧನಕ್ಕೆ ಕೆಎಸ್‌ಆರ್‌ಟಿಸಿ ಸಿಬ್ಬಂದಿ, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಸಂತಾಪ ಸೂಚಿಸಿವೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ