LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಅಪ್ರಾಪ್ತ ಮಗಳ ಮೇಲೆ ತಂದೆ ಹಾಗೂ ಆತನ ಸ್ನೇಹಿತನಿಂದಲೇ ನಿರಂತರ ಅತ್ಯಾಚಾರ

Advertisement

ರಾಯಚೂರು: ಕರುಳ ಕುಡಿಯನ್ನು ರಕ್ಷಿಸಬೇಕಾದ ತಂದೆಯೇ ಕಾಮಪಿಶಾಚಿಯಾದ ಘೋರ ಘಟನೆಯೊಂದು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳಿಂದ ತನ್ನ ಅಪ್ರಾಪ್ತ ಮಗಳ ಮೇಲೆ ತಂದೆ ಹಾಗೂ ಆತನ ಸ್ನೇಹಿತ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದು, ಇದೀಗ ಇಬ್ಬರೂ ಕಾಮುಕರು ಪೊಲೀಸರ ಅತಿಥಿಯಾಗಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ತಂದೆ ಹಾಗೂ ಆತನ ಸ್ನೇಹಿತ ಸೇರಿ ಅಪ್ರಾಪ್ತ ಬಾಲಕಿಯ ಮೇಲೆ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ.

ಬಾಲಕಿಯ ತಂದೆ ಅಮರೇಶ್ ಹಾಗೂ ಆತನ ಸ್ನೇಹಿತ ಸೀನು ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ರಕ್ಷಿಸಿ ಸಾಂತ್ವಾನ ಕೇಂದ್ರಕ್ಕೆ ಕಳುಹಿಸಲಾಗಿದ್ದು, ಅಲ್ಲಿ ಬಾಲಕಿಯು ತನಗೆ ನಡೆದ ದೌರ್ಜನ್ಯದ ಬಗ್ಗೆ ಮಾಹಿತಿ ನೀಡಿದ್ದಾಳೆ.

ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಮತ್ತು ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇಬ್ಬರೂ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಅವರು ತಿಳಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST