LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರೈತರ ಸಮಸ್ಯೆಗಳಿಗೆ ಸುದ್ದಿ ಮೂಲಕ ಸಹಕಾರ:ಸಂಜೀವಕುಮಾರ ಜುನ್ನಾ

Advertisement

ಹುಮನಾಬಾದ:ರೈತರ ವಿವಿಧ ಸಮಸ್ಯೆಗಳನ್ನು ಪತ್ರಿಕೆಗಳಲ್ಲಿ ಬಿತ್ತರಿಸುವ ಮೂಲಕ ಸರ್ಕಾರ ಮತ್ತು ಅಧಿಕಾರಿಗಳ ಗಮನಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹುಮನಾಬಾದ್ ತಾಲೂಕು ಘಟಕದ ನೂತನ ಅಧ್ಯಕ್ಷ ಸಂಜೀವಕುಮಾರ ಜುನ್ನಾ ಹೇಳಿದರು.

ಪಟ್ಟಣದ ರೈತ ಭವನ ಆವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ನಡೆದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ರೈತರು ಕೃಷಿಯಲ್ಲಿ ಎದುರಿಸುತ್ತಿರುವ ಸಮಸ್ಯೆಗಳು,ಬೆಳೆ ನಷ್ಟ,ನೀರಾವರಿ,ಬೆಂಬಲ ಬೆಲೆ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಮಾಧ್ಯಮಗಳ ಮೂಲಕ ಧ್ವನಿಯಾಗಿ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸಂಘದ ವತಿಯಿಂದ ಪ್ರಾಮಾಣಿಕ ಪ್ರಯತ್ನ ಮುಂದುವರಿಸಲಾಗುವುದು ಎಂದು ತಿಳಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಗುಂಡು ಅತಿವಾಳ ಮಾತನಾಡಿ,ರೈತರ ಬೆನ್ನಿಗೆ ಬೆನ್ನೆಲುಬಾಗಿ ರೈತರ ಪ್ರತಿಭಟನೆ, ಹೋರಾಟಕ್ಕೆ ಸುದ್ದಿ ಪ್ರಚಾರ ಮಾಡುವ ಮೂಲಕ ಸಹಕಾರ ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಪತ್ರಕರ್ತ ಸಜೀಶ ಲಂಬುನೋರ,ರೈತ ಸಂಘದ ತಾಲೂಕು ಅಧ್ಯಕ್ಷ ಸತೀಷ ನನ್ನೂರೆ,ಮುಖಂಡರಾದ ಕರಬಸಪ್ಪ ಹುಡಗಿ,ರಾಮರಾವ,ಗುರುಲಿಂಗಪ್ಪ ಮೇಲದೊಡ್ಡಿ ಸೇರಿದಂತೆ ಹಲವಾರು ರೈತ ಮುಖಂಡರು ಉಪಸ್ಥಿತರಿದ್ದರು.


ರದಿ:ಸಜೀಶ್ ಲಂಬುನೋರ್

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST