LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಸೋಮವಾರ ಗೋಧೂಳಿ ಮುಹೂರ್ತದಲ್ಲಿ ಡಿ. ಕೆ ಶಿವಕುಮಾರ್ ಪಟ್ಟಾಭಿಷೇಕ

Advertisement

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah ) ರಾಜೀನಾಮೆ ಬೆನ್ನಲ್ಲೇ ನೂತನ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ನಿಗದಿಯಾಗಿದೆ. ಡಿ.ಕೆ. ಶಿವಕುಮಾರ್ (Dk shivakumar ) ಮುಂದಿನ ಸೋಮವಾರದಂದು ಪ್ರಮಾಣವಚನ (Oath taking) ಸ್ವೀಕರಿಸಲಿದ್ದಾರೆ.

ಸೋಮವಾರ ಗೋಧೂಳಿ ಮುಹೂರ್ತದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಅತ್ಯಂತ ನಂಬಿಕಸ್ಥ ಮೂಲಗಳು ತಿಳಿಸಿವೆ.

ನಿನ್ನೆ ಗುರುವಾರ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, "ಡಿ.ಕೆ. ಶಿವಕುಮಾರ್ ಅವರೇ ರಾಜ್ಯದ ಮುಂದಿನ ಮುಖ್ಯಮಂತ್ರಿ" ಎಂದು ಸ್ಪಷ್ಟಪಡಿಸಿದ್ದರು.

ಪ್ರಸ್ತುತ ನೂತನ ಸರ್ಕಾರ ರಚನೆ ಹಾಗೂ ಸಚಿವ ಸಂಪುಟ ಕಸರತ್ತಿನ ಕುರಿತು ಅಂತಿಮ ಚರ್ಚೆ ನಡೆಸಲು ಉಭಯ ನಾಯಕರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಹೈಕಮಾಂಡ್ ನಾಯಕರ ಭೇಟಿ ಬಳಿಕ ಶನಿವಾರ ಅಥವಾ ಭಾನುವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ನಡೆಯಲಿದ್ದು, ಡಿಕೆಶಿ ಅವರನ್ನು ಅಧಿಕೃತವಾಗಿ ನಾಯಕನನ್ನಾಗಿ ಆಯ್ಕೆ ಮಾಡಲಾಗುತ್ತದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸೋಮವಾರ ಸಂಜೆ ರಾಜಭವನದಲ್ಲಿ ಅದ್ಧೂರಿ ಪದಗ್ರಹಣ ಕಾರ್ಯಕ್ರಮ ನೆರವೇರಲಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST