LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ದಲಿತ ಸಂಘರ್ಷ ಸಮಿತಿ ಎರಡು ದಿನದ ಅಧ್ಯಯನ ಶಿಬಿರ

Advertisement
ಕುಷ್ಟಗಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಕಲಬುರಗಿ ವಿಭಾಗದ ವತಿಯಿಂದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರ ಬುದ್ಧ ವಿಹಾರದಲ್ಲಿ ಹಮ್ಮಿಕೊಂಡ ಎರಡು ದಿನಗಳ ಅಧ್ಯಯನ ಶಿಬಿರ ಯಶಸ್ವಿಯಾಗಿ ನಡೆಯಿತು.

ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಇಂದಿರಾ ಬಿ. ಕೃಷ್ಣಪ್ಪ ಅವರು, ಮಾನವೀಯ ಮೌಲ್ಯಗಳ ಚಿಂತನೆಯನ್ನು ಎತ್ತಿ ಹಿಡಿದು ಬಡವರು, ಶೋಷಿತರು ಹಾಗೂ ದಲಿತ ಸಮುದಾಯದ ಮೇಲೆ ನಡೆಯುವ ಅನೇಕ ದೌರ್ಜನ್ಯಗಳ ವಿರುದ್ಧ ಪ್ರಾಮಾಣಿಕವಾದ ನ್ಯಾಯವನ್ನು ಒದಗಿಸುವ ಹೋರಾಟವನ್ನು ದಲಿತ ಸಂಘರ್ಷ ಸಮಿತಿ ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದು ಹೇಳಿದರು. ಹೋರಾಟ ಮತ್ತು ಚಳುವಳಿಗಳ ಮೂಲಕ ಸರ್ಕಾರದ ಗಮನ ಸೆಳೆದು ನ್ಯಾಯ ದೊರಕಿಸುವಲ್ಲಿ ಸಂಘಟನೆಯ ಪಾತ್ರ ಮಹತ್ವದ್ದಾಗಿದೆ ಎಂದರು

ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಅವರು ಮಾತನಾಡಿ, ಸಂಘಟನೆಯ ಗುರಿ, ಉದ್ದೇಶಗಳು ಹಾಗೂ ಹೋರಾಟದ ಹಾದಿಯಲ್ಲಿ ಸಾಗಿದ ಕಾರ್ಯಕರ್ತರ ತ್ಯಾಗ ಮತ್ತು ಬದ್ಧತೆಯನ್ನು ವಿವರಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಸಂಚಾಲಕ ರಮೇಶ್ ಡಾಕುಳಕಿ, ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಎ.ಬಿ. ರಾಮಚಂದ್ರಪ್ಪ, ರಾಜ್ಯ ಸಮಿತಿ ಸದಸ್ಯರಾದ ನಾಗಣ್ಣ ಬಡಿಗೇರ, ಅರ್ಜುನ್ ಗೊಬ್ಬೂರ, ಪಿ. ತಾಯಪ್ಪ, ರಾಜ್ಯ ಸಂಘಟನಾ ಸಂಚಾಲಕರಾದ ಹೆಚ್. ಹುಸೇನಪ್ಪ, ರಾಮಣ್ಣ ಕಲ್ಲದೇವನಹಳ್ಳಿ, ವಿಭಾಗೀಯ ಸಂಘಟನಾ ಸಂಚಾಲಕರಾದ ಶ್ರೀನಿವಾಸ್ ಖೇಳಗಿ, ಗೋಪಾಲ ರಾಂಪೂರೆ, ರಂಜಿತಾ ಜೈನೂರು ರಾಜ್ಯ ಮಹಿಳಾ ಓ,ಸಂ ಸಂಚಾಲಕರು, ಮತ್ತು ಸಂಜುಕುಮಾರ ಜವಾಳಕರ್, ಬಾಬುರಾವ ಶೇಳ್ಳಗಿ, ಹಣಮಂತ ಕುಡಹಳ್ಳಿ, ವಿಶಾಲ್ ಬೇಡಕಪಳ್ಳಿ, ಅಶೋಕ ಬೇಡಕಪಳ್ಳಿ, ಮಾರುತಿ ಹುಳಗೊಳಕರ್, ರೇವಣಸಿದ್ಧ ಬೀರನಳ್ಳಿ, ಮಲ್ಲಿಕಾರ್ಜುನ ಗವಾರ ಸೇರಿದಂತೆ ಅನೇಕ ಪದಾಧಿಕಾರಿಗಳು ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ಅಧ್ಯಯನ ಶಿಬಿರವು ಚಿಂತನೆ, ಚರ್ಚೆ ಮತ್ತು ಹೋರಾಟದ ದಿಕ್ಕುಗಳನ್ನು ಸ್ಪಷ್ಟಗೊಳಿಸುವಲ್ಲಿ ಸಹಕಾರಿಯಾಗಿದ್ದು, ಮುಂದಿನ ದಿನಗಳಲ್ಲಿ ಸಂಘಟಿತ ಹೋರಾಟಕ್ಕೆ ಶಕ್ತಿಯಾಗಲಿದೆ ಎಂದು ಶಿಬಿರಾರ್ಥಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.

ವರದಿ : ಹಣಮಂತ ಕುಡಹಳ್ಳಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ