LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ 

Advertisement

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶರಾಗಿದ್ದು, ಸೋಮವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. 

ಇದಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಹಾಸನ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಚೆನ್ನಮ್ಮ ರಾಜ್ಯದ ಎಲ್ಲಾ ಹೆಣ್ಣು ಮಕ್ಕಳಿಗೆ ತ್ಯಾಗ ಸ್ವರೂಪಿ ಮಾದರಿಯಾಗಿದ್ದಾರೆ.

ಮಾಜಿ ಪ್ರಧಾನಿಯವರ ಪತ್ನಿ, ಕೇಂದ್ರ ಸಚಿವರ ತಾಯಿ ಚೆನ್ನಮ್ಮ ರಾಜಕೀಯ ಕುಟುಂಬದ ಮಹಿಳೆಯಾಗಿದ್ದಾರೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಪದ್ಮನಾಭನಗರದ ನಿವಾಸದಲ್ಲಿ ಚೆನ್ನಮ್ಮ ಅಂತಿಮ ದರ್ಶನ ಪಡೆದ ಡಿ.ಕೆ. ಶಿವಕುಮಾರ್, ಪುಷ್ಪಗುಚ್ಛವಿರಿಸಿ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ದೇವೇಗೌಡರ ಕಾಲಿಗೆ ನಮಸ್ಕರಿಸಿ ಕೈಹಿಡಿದು ಪಕ್ಕದಲ್ಲೇ ಕುಳಿತು ಸಾಂತ್ವನ ಹೇಳಿದ್ದಾರೆ.

ನಾಳೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕು ಹರದನಹಳ್ಳಿ ಬಳಿಯ ಮಾವಿನಕೆರೆ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಇಂದು ಬೆಂಗಳೂರಿನಿಂದ ಹರದನಹಳ್ಳಿಗೆ ಪಾರ್ಥಿವ ಶರೀರ ರವಾನೆ ಮಾಡಲಾಗುವುದು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST