LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಧರ್ಮಸ್ಥಳ ಪ್ರಕರಣ : ಇಂದು ವಿಧಾನ ಸಭೆಯಲ್ಲಿ ಜಿ. ಪರಮೇಶ್ವರ್ ಉತ್ತರ 

Advertisement
ಬೆಂಗಳೂರು : ರಾಜ್ಯಾದ್ಯಂತ ಭಾರೀ ಕುತೂಹಲಕ್ಕೆ ಕಾರಣವಾಗಿರುವ ಧರ್ಮಸ್ಥಳದ ಪ್ರಕರಣದ ಎಸ್‌ಐಟಿ ತನಿಖೆ ಪ್ರಗತಿ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ವಿಧಾನ ಸಭೆಯಲ್ಲಿ ಉತ್ತರ ನೀಡಲಿದ್ದಾರೆ.

'ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆಸಿರುವವರ ಹೆಸರು ಬಹಿರಂಗಪಡಿಸಬೇಕು.ಮುಸುಕುಧಾರಿಯನ್ನು ಬಂಧಿಸಿ ಎಸ್‌ಐಟಿ ತನಿಖಾ ವರದಿಯನ್ನು ಸದನದಲ್ಲಿ ಮಂಡಿಸ ಬೇಕು ಎಂದು ಪ್ರತಿಪಕ್ಷ ಬಿಜೆಪಿ ಪಟ್ಟು ಹಿಡಿವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಇಂದಿನ ಕಲಾಪ ತೀವ್ರ ಕುತೂಹಲ ಮೂಡಿಸಿದೆ.

ಅನಾಮಧೇಯ ವ್ಯಕ್ತಿ ನೀಡಿದ ದೂರಿನ ಮೇಲೆ ಎಸ್‌ಐಟಿ ರಚನೆ ಮಾಡಿರುವುದು, ಧರ್ಮಸ್ಥಳ ಗ್ರಾಮದಲ್ಲಿ ಹೂತಿಟ್ಟಿರುವ ಶವಗಳಿಗಾಗಿ 15 ದಿನಕ್ಕೂ ಹೆಚ್ಚು ದಿನಗಳಿಂದ ಗುಂಡಿ ತೋಡುತ್ತಿದ್ದರೂ ಏನೂ ದೊರೆಯದ ವಿಚಾರವಾಗಿ ಬಿಜೆಪಿ ನಾಯಕರು ಸದನದಲ್ಲಿ ತೀವ್ರ ಗದ್ದಲ ಸೃಷ್ಟಿಸುವ ನಿರೀಕ್ಷೆಯಿದೆ.

ಧರ್ಮಸ್ಥಳ ಕೇಸಿನ ಬಗ್ಗೆ ಸೋಮವಾರ ವಿಧಾನಸಭೆಯಲ್ಲಿ ಪೂರ್ಣ ಉತ್ತರ ನೀಡುವೆ. ಯಾರೂ ರಾಜಕೀಯ ಮಾಡಬಾರದು.

ಇದು ಕಾನೂನಾತ್ಮಕ ಕೇಸಾ ಗಿದ್ದು, ಪೊಲೀಸರು ಎಫ್ ಐಆರ್ ಹಾಕಿ ತನಿಖೆ ಮಾಡ್ತಾರೆ. ತಪ್ಪು ಇದ್ದರೆ ಮಾತ್ರ ಕೇಸ್ ಮುಂದುವರಿಸ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ