LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಧರ್ಮಸ್ಥಳ ಕುರಿತು ಅಪಪ್ರಚಾರ : ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಅಭಿಯಾನ

Advertisement
ಬೆಂಗಳೂರು : ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಬಿಜೆಪಿ ಶಾಸಕ ಎಸ್‌.ಆರ್.ವಿಶ್ವನಾಥ್ ನೇತೃತ್ವದಲ್ಲಿ ಶನಿವಾರ 'ಧರ್ಮಸ್ಥಳ ಚಲೋ' ಅಭಿಯಾನ ನಡೆಯಲಿದೆ.

ಬೆಳಗ್ಗೆ 6.30ಕ್ಕೆ ಬೆಂಗಳೂರಿನ ನೆಲಮಂಗಲ ಟೋಲ್‌ ಮೂಲಕ ಸುಮಾರು 400ಕ್ಕೂ ಹೆಚ್ಚು ವಾಹನಗಳಲ್ಲಿ ಯಲಹಂಕ ಕ್ಷೇತ್ರದ ಭಕ್ತರೊಂದಿಗೆ ವಿಶ್ವನಾಥ್ ಅವರು ಶ್ರೀಕ್ಷೇತ್ರಕ್ಕೆ ಪ್ರಯಾಣ ಆರಂಭಿಸಲಿದ್ದಾರೆ.

ಸಂಜೆ ಧರ್ಮಸ್ಥಳದ ಮಂಜುನಾಥನ ವಿಶೇಷ ದರ್ಶನ ಪಡೆದು ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂಬ ಬೇಡಿಕೆಯೊಂದಿಗೆ ಸಂಕಲ್ಪ ಮಾಡಲಿದ್ದಾರೆ. ಬಳಿಕ ಭಾನುವಾರ ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಸೇರಿ ಪಕ್ಷದ ಶಾಸಕರೊಂದಿಗೆ ಮತ್ತೊಮ್ಮೆ ಮಂಜುನಾಥನ ವಿಶೇಷ ದರ್ಶನ ಪಡೆದು ವಾಪಸಾಗಲಿದ್ದಾರೆ.

ಶುಕ್ರವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್‌, ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಧರ್ಮಸ್ಥಳಕ್ಕೆ ಹೋಗುತ್ತಿದ್ದೇವೆ. ಸಂಜೆ ಮಂಜುನಾಥ ಸ್ವಾಮಿ ದರ್ಶನ ಪಡೆದು ಸಂಕಲ್ಪ ಮಾಡುತ್ತೇವೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದು ಸಂಕಲ್ಪ ಮಾಡುತ್ತೇವೆ ಎಂದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST