LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಿಜೆಪಿ ನಾಯಕರಿಗೆ ಸೋಲಿನ ಹತಾಶೆ - ಕಾಂಗ್ರೆಸ್ ಮುಖಂಡ  ಕುಮಟಾಕರ್ ವ್ಯಂಗ್ಯ

Advertisement

ಹುಬ್ಬಳ್ಳಿ:ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ಭಯದಿಂದ ಬಿಜೆಪಿ ನಾಯಕರಿಗೆ ತೀವ್ರ ಹತಾಶೆ ಕಾಡುತ್ತಿದ್ದು, ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಇಲ್ಲಸಲ್ಲದ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಅಶ್ಫಾಕ್ ಕುಮಟಾಕರ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, "ಚುನಾವಣಾ ಆಯೋಗದ ಆದೇಶದಂತೆ ಬಿಎಲ್‌ಓಗಳು ಅತ್ಯಂತ ಪಾರದರ್ಶಕವಾಗಿ ಮನೆ ಮನೆಗೆ ಭೇಟಿ ನೀಡಿ ಗಣತಿ ಕಾರ್ಯ ನಡೆಸುತ್ತಿದ್ದಾರೆ. ಆದರೆ, ಈ ಪ್ರಕ್ರಿಯೆಯನ್ನು ಸಹಿಸದ ಬಿಜೆಪಿಗರು ಅಧಿಕಾರಿಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಆರ್. ಅಶೋಕ ಹಾಗೂ ಬಸವರಾಜ ಬೊಮ್ಮಾಯಿ ಅವರು ಸೋಲಿನ ಭೀತಿಯಿಂದಲೇ ಇಂತಹ ಬೇಜವಾಬ್ದಾರಿ ಆರೋಪಗಳನ್ನು ಮಾಡುತ್ತಿದ್ದಾರೆ" ಎಂದು ಕಿಡಿಕಾರಿದರು.

ಬಿಜೆಪಿಯ ಈ ಅನಗತ್ಯ ಒತ್ತಡ ಮತ್ತು ಕಿರುಕುಳದಿಂದಾಗಿ ಈಗಾಗಲೇ ಇಬ್ಬರು ಅಧಿಕಾರಿಗಳು ಅಕಾಲಿಕ ಸಾವಿಗೀಡಾಗಿದ್ದಾರೆ. ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸುವಂತೆ ಆಗ್ರಹಿಸುತ್ತಿರುವ ಬಿಜೆಪಿ ಮುಖಂಡರ ನಡೆ ದೇಶದ ಸ್ವಾಯತ್ತ ಸಂಸ್ಥೆಯಾದ ಚುನಾವಣಾ ಆಯೋಗಕ್ಕೆ ಮಾಡುತ್ತಿರುವ ಅಪಮಾನವಾಗಿದೆ ಎಂದು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ವರದಿ:ಸುಧೀರ್ ಕುಲಕರ್ಣಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್