LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವೈದ್ಯರ ಚೀಟಿ ಇಲ್ಲದೇ ಔಷಧಿ ನೀಡಿದರೇ ಲೈಸೆನ್ಸ್ ರದ್ದು

Advertisement

ವೈದ್ಯರ ಸಲಹಾ ಚೀಟಿ ಇಲ್ಲದೇ ಅನುಸೂಚಿತ ಔಷಧಗಳನ್ನು ಮಾರಾಟ ಮಾಡುವ ಔಷಧ ಅಂಗಡಿಗಳ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾ ಸಹಾಯಕ ಔಷಧ ನಿಯಂತ್ರಕ ವೆಂಕಟೇಶ ರಾಥೋಡ ಅವರು ಸೂಚನೆ ನೀಡಿದ್ದಾರೆ.


ಔಷಧ ಮತ್ತು ಕಾಂತಿವರ್ಧಕ ಅಧಿನಿಯಮ 1940ರ ಅಡಿಯಲ್ಲಿ ಅನುಸೂಚಿ ಹೆಚ್, ಹೆಚ್1 ಮತ್ತು ಎಕ್ಸ್ ಅಡಿಯಲ್ಲಿ ಬರುವ ಮತ್ತುಬರಿಸುವ, ಅಮಲುಕಾರಕ ಅಥವಾ ರೋಗ ನಿರೋಧಕ ಮತ್ತು ಇತರೆ ಅನುಸೂಚಿತ ಔಷಧಗಳನ್ನು ವೈದ್ಯರ ಸಲಹಾ ಚೀಟಿ ಇಲ್ಲದೇ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ.

ಕೊಪ್ಪಳ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಮಾದಕ ವ್ಯಸನ ನಿಯಂತ್ರಣ (ನಾರ್ಕೋ ಕೋ-ಆರ್ಡಿನೇಷನ್ ಸೆಂಟರ್) ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಸಹಾಯಕ ಔಷಧ ನಿಯಂತ್ರಕರು ಹಾಗೂ ಉಪ ಔಷಧ ನಿಯಂತ್ರಕರು ಜಿಲ್ಲೆಯಲ್ಲಿನ ಔಷಧ ಅಂಗಡಿಗಳನ್ನು ಪರಿವೀಕ್ಷಣೆ ಕೈಗೊಂಡಿದ್ದು, ಈ ಅವಧಿಯಲ್ಲಿ ವೈದ್ಯರ ಸಲಹಾ ಚೀಟಿ ಇಲ್ಲದೇ ಅನುಸೂಚಿತ ಔಷಧಗಳನ್ನು ಮಾರಾಟ ಮಾಡಿರುವ ಒಟ್ಟು ಒಂದು ಸಂಸ್ಥೆಯ ಪರವಾನಿಗೆ ರದ್ದುಗೊಳಿಸಲಾಗಿದೆ ಮತ್ತು ಒಟ್ಟು ನಾಲ್ಕು ಸಂಸ್ಥೆಗಳ ಪರವಾನಿಗೆಗಳನ್ನು ಅಮಾನತ್ತುಗೊಳಿಸಿ ಆದೇಶಗೊಳಿಸಲಾಗಿದೆ.

ಆದ್ದರಿಂದ ಜಿಲ್ಲೆಯ ಎಲ್ಲಾ ಚಿಲ್ಲರೆ ಔಷಧ ವ್ಯಾಪಾರಸ್ಥರು ಅನುಸೂಚಿತ ಹೆಚ್, ಹೆಚ್1 ಮತ್ತು ಎಕ್ಸ್ ಅಡಿಯಲ್ಲಿ ಬರುವ ಮತ್ತುಬರಿಸುವ, ಅಮಲುಕಾರಕ, ರೋಗ ನಿರೋಧಕ ಮತ್ತು ಇತರೆ ಅನುಸೂಚಿತ ಔಷಧಗಳನ್ನು ವೈದ್ಯರ ಸಲಹಾ ಚೀಟಿ ಇಲ್ಲದೇ ಮಾರಾಟ ಮಾಡಬಾರದು ಹಾಗೂ ಇದರ ಕುರಿತು ಎಚ್ಚರಿಕೆ ಫಲಕವನ್ನು ಸಾರ್ವಜನಿಕರಿಗೆ ಕಾಣುವಂತೆ ತಮ್ಮ ಅಂಗಡಿಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕೆಂದು ಕೊಪ್ಪಳ ಜಿಲ್ಲಾ ಸಹಾಯಕ ಔಷಧ ನಿಯಂತ್ರಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ