LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಖಾತೆ ಹಂಚಿಕೆ ಬಗ್ಗೆ ಅಸಮಾಧಾನ : ಸಭೆಯಿಂದ ಹೊರ ನಡೆದ ರಾಮಲಿಂಗಾರೆಡ್ಡಿ 

Advertisement

ಬೆಂಗಳೂರು: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯ ಮಧ್ಯೆಯೇ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸಭೆಯಿಂದ ಹೊರನಡೆದಿರುವ ಹಠಾತ್ ಬೆಳವಣಿಗೆ ನಡೆದಿದೆ.

ಸಭೆಯಲ್ಲಿ ಸಚಿವ ಸಂಪುಟದ ಜವಾಬ್ದಾರಿ ಹಂಚಿಕೆ ಅಥವಾ ಇಲಾಖಾ ವಿಷಯಗಳ ಚರ್ಚೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪ್ರಸ್ತಾಪಕ್ಕೆ ಸಚಿವ ರಾಮಲಿಂಗಾರೆಡ್ಡಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಭೆಯಲ್ಲಿ ಜಲಸಂಪನ್ಮೂಲ ಇಲಾಖೆಗೆ ಸಂಬಂಧಿಸಿದ ವಿಷಯ ಮುನ್ನೆಲೆಗೆ ಬಂದಾಗ ಸಿಟ್ಟಿಗೆದ್ದ ರಾಮಲಿಂಗಾರೆಡ್ಡಿ ಅವರು, "ಜಲಸಂಪನ್ಮೂಲಕ್ಕೂ ನನಗೂ ಏನು ಸಂಬಂಧ? ನಾನು ಬೆಂಗಳೂರಿನವನು, ನನಗೆ ಬೆಂಗಳೂರೇ ಬೇಕು" ಎಂದು ನೇರವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮಾಧಾನದ ಮಾತುಗಳಿಗೆ ಒಪ್ಪದ ಅವರು, ಸಭೆಯ ನಡುವೆಯೇ ಎದ್ದು ಹೊರನಡೆದಿದ್ದಾರೆ.

ಮಖ್ಯಮಂತ್ರಿಗಳ ನಿಲುವಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಸಚಿವರು, "ನನಗೆ ಬೇರೆ ಇಲಾಖೆ ಬೇಡ, ನಾನು ಕೇವಲ ಶಾಸಕನಾಗಿ ಇರುತ್ತೇನೆ ಸಾಕು" ಎಂದು ಬೇಸರದಿಂದ ನುಡಿದು ಸಭೆಯಿಂದ ನಿರ್ಗಮಿಸಿದ್ದಾರೆ. ಈ ಘಟನೆಯು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಆಂತರಿಕ ವಲಯದಲ್ಲಿ ಹಾಗೂ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ