LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ  : ಡಿಕೆ ಶಿವಕುಮಾರ್

Advertisement
ಬೆಂಗಳೂರು : "500 ಕೋಟಿ ಟ್ರಿಪ್ ಗಳನ್ನು ಕಂಡಿರುವ ಶಕ್ತಿ ಯೋಜನೆ ಇಡೀ ದೇಶಕ್ಕೆ ಮಾದರಿ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಣ್ಣಿಸಿದರು.

"ಶಕ್ತಿ" ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣ 500 ಕೋಟಿ ಟ್ರಿಪ್ ಮುಟ್ಟಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ವಿಂಡ್ಸರ್ ವೃತ್ತದಲ್ಲಿ ಬಿಎಂಟಿಸಿ ಬಸ್ ನಲ್ಲಿ 500 ನೇ ಕೋಟಿಯ ಟಿಕೆಟ್ ಅನ್ನು ಮಹಿಳಾ ಪ್ರಯಾಣಿಕರಿಗೆ ಸೋಮವಾರ ವಿತರಿಸಿದರು.ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

"ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಎಲ್ಲಿಯವರೆಗೆ ದೇವರು ಶಕ್ತಿ ಹಾಗೂ ಜನ ಅಧಿಕಾರ ನೀಡುತ್ತಾರೋ ಅಲ್ಲಿಯತನಕ ಯೋಜನೆಗಳು ಮುಂದುವರೆಯುತ್ತವೆ" ಎಂದರು.

"ಕಾಂಗ್ರೆಸ್ ಪಕ್ಷ ಈ ದೇಶದ ಜನರಿಗೆ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ನೀಡಿದೆ. ಹಲಾವಾರು ಪಿಂಚಣಿ ಯೋಜನೆಗಳು, ನರೇಗಾ, ಬ್ಯಾಂಕ್ ರಾಷ್ಟ್ರೀಕರಣ ಸೇರಿದಂತೆ ನಮ್ಮ ಯೋಜನೆಗಳನ್ನು ಬಿಜೆಪಿ ಸೇರಿದಂತೆ ಯಾರೂ ಸಹ ನಿಲ್ಲಿಸಲು ಸಾಧ್ಯವಿಲ್ಲ. ಇವು ಜನರ ಹೃದಯ ಹಾಗೂ ಬದುಕಿಗೆ ಬೇಕಾದಂತಹ ಕಾರ್ಯಕ್ರಮಗಳು. ಇವು ನಿರಂತರವಾಗಿರುತ್ತವೆ" ಎಂದರು.

"ಈ ಯೋಜನೆಯಿಂದ ರಾಜ್ಯದ ಉದ್ದಗಲಕ್ಕೂ ಮಹಿಳೆಯರು ಉಚಿತವಾಗಿ ಸಂಚಾರ ಮಾಡಬಹುದು. ಯಾವುದೇ ಖರ್ಚು ಮಾಡದೇ ತಮ್ಮ ಪ್ರೀತಿಪಾತ್ರರ ಮನೆಗಳಿಗೆ ಹೋಗಬಹುದು.‌ ಕೆಲಸಕ್ಕೆ ಹೋಗುವ ಅನೇಕ ಮಹಿಳೆಯರಿಗೆ ಪ್ರತಿ ತಿಂಗಳು 500 ರಿಂದ‌ 1 ಸಾವಿರಕ್ಕೂ ಹೆಚ್ಚು ಹಣ ಉಳಿತಾಯವಾಗುತ್ತಿದೆ" ಎಂದರು.

"ಮಹಿಳೆಯೊಬ್ಬರು ಸಂತೋಷದಿಂದ ನನಗೆ ರೊಟ್ಟಿ, ಶೇಂಗಾ ಹೋಳಿಗೆ ನೀಡಿದರು. ನಮ್ಮ ಯೋಜನೆ ಬಗ್ಗೆ ಯಾರು ಎಷ್ಟೇ ಟೀಕೆ ಮಾಡಿದರೂ ಅವುಗಳು ಕಾಲಕ್ರಮೇಣ ಸತ್ತು ಹೋಗುತ್ತವೆ. ನಮ್ಮ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ.‌

ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿರುವ ಕಾರಣಕ್ಕೆ ನಮಗೆ ಹೆಚ್ಚು ಸಂತೋಷವಾಗಿದೆ. ಇದೆಲ್ಲವನ್ನು ಜಾರಿ ಮಾಡಲು ಜನ ನೀಡುರುವ ಶಕ್ತಿಯಿಂದ ನಮಗೆ ಬಲಬಂದಿದೆ" ಎಂದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ