LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕಾಲುವೆಗಳಿಗೆ ನೀರು ಹರಿಸಿ: ಜಲಾಶಯಕ್ಕೆ ಇಳಿದು ರೈತರ ಆಕ್ರೋಶ

Advertisement

ಆಲಮಟ್ಟಿ:ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ವ್ಯಾಪ್ತಿಗೆ ಬರುವ ಎಲ್ಲಾ ಕಾಲುವೆಗಳಿಗೆ ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘ (ರಿ) ಜಿಲ್ಲಾ ಘಟಕದ ನೇತೃತ್ವದಲ್ಲಿ ರೈತರು ಜಲಾಶಯದ ನೀರಿಗೆ ಇಳಿದು ಪ್ರತಿಭಟನೆ ನಡೆಸಿದರು.ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ರೈತರು, ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರಿಗೆ ತೀವ್ರ ಅನ್ಯಾಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. "ಕಾಲುವೆಗಳಿಗೆ ನೀರು ಬಿಡದಿದ್ದರೆ ನಾವು ಇಲ್ಲಿಯೇ ಸಾಯುತ್ತೇವೆ" ಎಂದು ಎಚ್ಚರಿಕೆ ನೀಡಿದರು.
news_1783937102_0_428.webp

 

ಪ್ರತಿಭಟನೆ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ರೈತರನ್ನು ಮನವೊಲಿಸಲು ಪ್ರಯತ್ನಿಸಿದರೂ, ರೈತರು ತಮ್ಮ ಹೋರಾಟವನ್ನು ಮುಂದುವರಿಸಿದರು. ಸರ್ಕಾರ ರೈತರಿಗೆ ಮಲತಾಯಿ ಧೋರಣೆ ತೋರಿಸುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಕೂಡಲೇ ನೀರು ಹರಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.ಈ ಪ್ರತಿಭಟನೆಯಿಂದ ಜಲಾಶಯ ಪ್ರದೇಶದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ವರದಿ :ಅಲಿ ಮಕಾನದಾರ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST