LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಭಾಮೈದನ ಮೇಲಿನ ಇಡಿ ದಾಳಿಯನ್ನು ರಾಜಕೀಯ ಪ್ರೇರಿತ ಎನ್ನಲಾಗದು : ಸತೀಶ್ ಜಾರಕಿಹೊಳಿ 

Advertisement

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ಡಾ.ವೈ.ಮಂಜುನಾಥ್ ಮನೆ ಮೇಲೆ ಜಾರಿ ನಿರ್ದೇಶನಾಲಯ- ಇಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಇಡಿ ದಾಳಿಯನ್ನು ರಾಜಕೀಯ ಪ್ರೇರಿತ ಎನ್ನಲಾಗದು ಎಂದು ತಿಳಿಸಿದ್ದಾರೆ.

‌ ಬೆಳಗಾವಿಯ ಕಾಂಗ್ರೆಸ್‌ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಬೆಳಗಾವಿ ಜಿಲ್ಲಾ ಅಬಕಾರಿ ಉಪ ಆಯುಕ್ತರಾದ ವೈ.ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿರುವುದು ನಿಜ. ಅವರು ನಮ್ಮ ಸಂಬಂಧಿಯೂ ಹೌದು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಇದನ್ನು ರಾಜಕೀಯ ಪ್ರೇರಿತ ದಾಳಿ ಎಂದು ಹೇಳಲು ಸಾಧ್ಯವಿಲ್ಲ ಎಂದರು.

ಮಂಜುನಾಥ್ ಅವರ ಮೇಲೆ ಇಷ್ಟು ದೊಡ್ಡ ಮಟ್ಟದಲ್ಲಿ ಇಡಿ ದಾಳಿ ನಡೆಸಿರುವುದು ಇದೇ ಮೊದಲು. ಈ ಬೆಳವಣಿಗೆ ನಮಗೂ ಕೂಡ ಆತಂಕ ಮೂಡಿಸಿದೆ. ಈ ಹಿಂದೆ 2011 ರಲ್ಲಿ ಅವರ ಮೇಲೊಂದು ಪ್ರಕರಣ ದಾಖಲಾಗಿತ್ತು, ಆದರೆ ಅದು ಈಗಾಗಲೇ ರದ್ದಾಗಿದೆ.

ಈಗಿನ ದಾಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಏನು ಪ್ರಶ್ನೆ ಕೇಳುತ್ತಾರೆ, ಯಾವ ಮಾಹಿತಿ ಪಡೆಯುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಇಂದು ನಾನು ಕೂಡ ಮಂಜುನಾಥ್ ಅವರ ಜೊತೆ ಮಾತನಾಡುತ್ತೇನೆ ಎಂದರು.

ನಮ್ಮನ್ನು ರಾಜಕೀಯವಾಗಿ ಕಟ್ಟಿ ಹಾಕಲು ಈ ದಾಳಿ ನಡೆಸಲಾಗುತ್ತಿದೆಯೇ ಎಂಬುದು ಈಗಲೇ ಗೊತ್ತಾಗುವುದಿಲ್ಲ. ಅದಕ್ಕೆ ಕನಿಷ್ಠ ಆರು ತಿಂಗಳು ಬೇಕಾಗುತ್ತದೆ. ಸದ್ಯಕ್ಕೆ ಏನೂ ಹೇಳಲಾಗದು. ಸಾಮಾನ್ಯವಾಗಿ 2028ರ ಚುನಾವಣೆ ಹತ್ತಿರ ಬರುತ್ತಿದ್ದಂತೆ ಇಂತಹ ಇಡಿ ದಾಳಿಗಳು ಆರಂಭವಾಗುವುದು ಸಹಜ ಎಂದರು.

ಮಂಜುನಾಥ್ ಅವರ ಕುಟುಂಬಸ್ಥರು ಕಳೆದ 30 ವರ್ಷಗಳಿಂದ ಮದ್ಯದ ಅಂಗಡಿ ವ್ಯವಹಾರದಲ್ಲಿದ್ದಾರೆ. ಭ್ರಷ್ಟಾಚಾರದ ತನಿಖೆ ಕೇವಲ ಒಂದು ಇಲಾಖೆಗೆ ಮಾತ್ರ ಸೀಮಿತವಾಗಿಲ್ಲ, ಈ ಪ್ರಕರಣ ಇಷ್ಟಕ್ಕೇ ಮುಗಿಯುವುದೂ ಇಲ್ಲ ಎಂದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ