LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿದ್ಯುತ್ ಶಾಕ್ : ಪ್ರತಿ ಯೂನಿಟ್‌ಗೆ 91 ಪೈಸೆ ದರ ಹೆಚ್ಚಳ

Advertisement

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ನಿಗಮವು (ಬೆಸ್ಕಾಂ) ಗೃಹ ಬಳಕೆದಾರರಿಗೆ ಪ್ರತಿ ಯೂನಿಟ್‌ಗೆ ಒಟ್ಟು 91 ಪೈಸೆ ದರ ಹೆಚ್ಚಳ ಮಾಡಿದ್ದು, ಮೇ ತಿಂಗಳಿನಿಂದಲೇ ಈ ಹೊಸ ದರ ಜಾರಿಗೆ ಬರಲಿದೆ.ಈಗಾಗಲೇ ಏಪ್ರಿಲ್ ತಿಂಗಳಿನಿಂದ ಪ್ರತಿ ಯೂನಿಟ್‌ಗೆ 35 ಪೈಸೆ ಏರಿಕೆ ಮಾಡಲಾಗಿತ್ತು.

ಪ್ರಸ್ತುತ ಮೇ ತಿಂಗಳಿನಿಂದ 'ಟ್ರೂ ಅಪ್ ಚಾರ್ಜ್' ಹೆಸರಿನಲ್ಲಿ ಹೆಚ್ಚುವರಿಯಾಗಿ 56 ಪೈಸೆ ದರ ವಿಧಿಸಲಾಗುತ್ತಿದೆ.ಒಟ್ಟಾರೆಯಾಗಿ ಗ್ರಾಹಕರು ಪ್ರತಿ ಯೂನಿಟ್‌ಗೆ 91 ಪೈಸೆ ಹೆಚ್ಚಿನ ಹಣ ಪಾವತಿಸಬೇಕಾಗುತ್ತದೆ.

 

ವಾಣಿಜ್ಯ ಬಳಕೆದಾರರಿಗೆ 'ಡಬಲ್' ಹೊರೆ:

 

ಗೃಹ ಬಳಕೆದಾರರಿಗಿಂತಲೂ ವಾಣಿಜ್ಯ ಮತ್ತು ಕೈಗಾರಿಕಾ ಬಳಕೆದಾರರಿಗೆ ಈ ಬೆಲೆ ಏರಿಕೆ ಮತ್ತಷ್ಟು ಆಘಾತಕಾರಿಯಾಗಿದೆ. ವಿವಿಧ ವರ್ಗದ ವಾಣಿಜ್ಯ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ ₹1.10 ರಿಂದ ಗರಿಷ್ಠ ₹2.81 ರವರೆಗೆ ದರ ಹೆಚ್ಚಳವಾಗುವ ಸಾಧ್ಯತೆಯಿದೆ. ಕೆಇಆರ್‌ಸಿ (KERC) ಈಗಾಗಲೇ ಕೈಗಾರಿಕಾ ಮತ್ತು ವಾಣಿಜ್ಯ ಬಳಕೆಯ ವಿದ್ಯುತ್ ದರವನ್ನು ಪರಿಷ್ಕರಿಸಲು ಅನುಮತಿ ನೀಡಿದೆ.

ಗೃಹಜ್ಯೋತಿ ಫಲಾನುಭವಿಗಳಿಗೆ ವಿನಾಯಿತಿ:

ಸರ್ಕಾರದ 'ಗೃಹಜ್ಯೋತಿ' ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಗ್ರಾಹಕರಿಗೆ ಈ ದರ ಏರಿಕೆಯಿಂದ ಹೆಚ್ಚಿನ ತೊಂದರೆಯಾಗುವುದಿಲ್ಲ. 200 ಯೂನಿಟ್‌ಗಿಂತ ಕಡಿಮೆ ಬಳಕೆ ಮಾಡುವವರಿಗೆ ಯೋಜನೆಯ ಮಿತಿಯೊಳಗೆ ಉಚಿತ ವಿದ್ಯುತ್ ಲಭ್ಯವಿರಲಿದೆ. ಆದರೆ, ಮಿತಿ ಮೀರಿದ ಬಳಕೆಗೆ ಹೊಸ ದರ ಅನ್ವಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯಾವ ಜಿಲ್ಲೆಗಳಿಗೆ ಅನ್ವಯ?

ಬೆಸ್ಕಾಂ ವ್ಯಾಪ್ತಿಗೆ ಒಳಪಡುವ ಒಟ್ಟು ಎಂಟು ಜಿಲ್ಲೆಗಳ ಗ್ರಾಹಕರಿಗೆ ಈ ಹೊರೆ ಬೀಳಲಿದೆ:

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ

ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ

ರಾಮನಗರ, ಚಿತ್ರದುರ್ಗ ಮತ್ತು ದಾವಣಗೆರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ