LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಚುನಾವಣೆ ಕೆಲಸಗಳಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ವಿನಾಯಿತಿ : ಸಚಿವೆ ಹೆಬ್ಬಾಳಕರ್

Advertisement
ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಇದರೊಂದಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಎಲ್ಲಾ ಸಂಘಟನೆಗಳ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ.

ಮುಂದಿನ ಅಕ್ಟೋಬರ್‌ನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಗೌರ್ವನ್ಮೆಂಟ್‌ ಮಾಂಟೆಸ್ಸರಿ) ತರಗತಿಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಅವರೊಂದಿಗೆ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಈ ಕುರಿತು ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಬೇಕಿದ್ದು, ಇನ್ನುಂದೆ ಅಂಗನವಾಡಿ ಕಾರ್ಯಕರ್ತೆಯರು, ಚುನಾವಣಾ ಕೆಲಸಗಳಿಂದ ವಿನಾಯಿತಿ ಪಡೆಯಲಿದ್ದಾರೆ.

ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಶೀಘ್ರವೇ ಆರಂಭವಾಗಲಿದ್ದು, ಕಾರ್ಯಕರ್ತೆಯರ ಒತ್ತಡವನ್ನು ಇಳಿಸುವ ಸಲುವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ