LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಪ್ರಖ್ಯಾತ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮ*ತ್ಯೆ

Advertisement

ಕೇರಳ : ತುಳು ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಿದ್ದ ಕಾಸರಗೋಡಿನ ಪ್ರಖ್ಯಾತ ಸೋಶಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಆತ್ಮ*ತ್ಯೆ ಮಾಡಿಕೊಡಿದ್ದಾರೆ. ಆಡೂರು ಮೂಲದ ಚಿನ್ನು ಪಾಪು ಆತ್ಮ*ತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅವರಗೆ 24 ವರ್ಷ ವಯಸ್ಸಾಗಿತ್ತು.


ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ಅವರನ್ನ ಆಸ್ಪತ್ರೆಗೆ ದಾಖಲು ಮಾಡುವ ವೇಳೆಗೆ ಅವರು ಸಾವು ಕಂಡಿರುವುದು ದೃಢವಾಗಿತ್ತು. ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ. ಮೃತ ಮಹಿಳೆಯ ನಿಜವಾದ ಹೆಸರು ಕೆ.ರೇಷ್ಮಾ, ಆದರೆ, ಸೋಶಿಯಲ್‌ ಮೀಡಿಯಾದಲ್ಲಿ ಚಿನ್ನು ಪಾಪು ಎನ್ನುವ ಹೆಸರಿನಿಂದಲೇ ಅವರು ಫೇಮಸ್‌ ಆಗಿದ್ದರು.

ಮೂಲತಃ ಅವರು ಕೇರಳದ ಆಡೂರಿನವರಾಗಿದ್ದರೂ, ಕರ್ನಾಟಕದ ಗಡಿ ಭಾಗಕ್ಕೆ ಹೊಂದಿರುವ ಕನ್ನಡಿಗರೇ ಹೆಚ್ಚಿರುವ ಕೇರಳದ ಕಾಸರಗೋಡಿನ ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಅವರ ಶವ ಕ್ವಾರ್ಟರ್ಸ್‌ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ. ಚಿನ್ನು ಪಾಪು ಒಂದು ತಿಂಗಳ ಹಿಂದೆ ವಿಚ್ಛೇದನ ಪಡೆದಿದ್ದರು ಎನ್ನುವುದು ಗೊತ್ತಾಗಿದೆ.

ಅವರಿಗೆ ನಾಲ್ಕು ವರ್ಷದ ಮಗನಿದ್ದಾನೆ. ಆತ್ಮ*ತ್ಯೆಗೆ ವಿಚ್ಛೇದನಕ್ಕೆ ಸಂಬಂಧಿಸಿದ ಯಾವುದೇ ಕಾರಣವಿದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ವಿವರವಾದ ತನಿಖೆಯನ್ನು ಪ್ರಾರಂಭಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ