LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅವರಾದಿಯಲ್ಲಿ ಆಸ್ತಿಗಾಗಿ ತಂದೆ-ಮಗಳು ಕೊಲೆ , ಮೂವರು ಆರೋಪಿಗಳ ಬಂಧನ

Advertisement

ಕಿತ್ತೂರು : ಬೆಳಗಾವಿ ಜಿಲ್ಲೆಯ  ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಚೇರಿಯಲ್ಲಿ ಆಸ್ತಿ ವಿವಾದದ ಸಂಬಂಧಿಸಿದಂತೆ  ತಂದೆ ಹಾಗೂ ಮಗಳನ್ನು ಕೊಲೆ ಮಾಡಿರುವ ಘಟನೆ ನಡೆದಿದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿತ್ತೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಬಸಪ್ಪ ಕುಂದರಗಿ, ಸಂಗಪ್ಪ ಕುಂದರಗಿ ಹಾಗೂ ಮಡಿವಾಳಪ್ಪ ಕುಂದರಗಿ ಎಂದು ಗುರುತಿಸಲಾಗಿದೆ.

ಸೆಪ್ಟೆಂಬರ್ 16 ರಂದು ಬೆಳಗ್ಗೆ ಸುಮಾರು 11.15ರ ವೇಳೆಗೆ ಧಾರವಾಡ ನಿವಾಸಿ ರುದ್ರಪ್ಪ ಕುಂದರಗಿ (67) ಹಾಗೂ ಅವರ ಪುತ್ರಿ ಶಶಿಕಲಾ ಅವರು ಆಸ್ತಿ ನಂಬರ್ 135ರ ಹೆಸರು ದಾಖಲಾತಿ ಅರ್ಜಿಯ ವಿಚಾರಣೆಗಾಗಿ ಅವರಾದಿ ಗ್ರಾಮ ಪಂಚಾಯಿತಿ ಕಚೇರಿಗೆ ಆಗಮಿಸಿದ್ದರು.

ಈ ವೇಳೆ ಆಸ್ತಿ ವಿಚಾರವಾಗಿ ಆರೋಪಿಗಳು ಹಾಗೂ ರುದ್ರಪ್ಪ ಮತ್ತು ಶಶಿಕಲಾ ಅವರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ. ಗಲಾಟೆ ವಿಕೋಪಕ್ಕೆ ತಿರುಗಿದ್ದು, ಆರೋಪಿಗಳು ಕೂಡಗೋಲು ಹಾಗೂ ಕಲ್ಲುಗಳಿಂದ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡ ರುದ್ರಪ್ಪ ಹಾಗೂ ಶಶಿಕಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಲಾಟೆಯನ್ನು ಬಿಡಿಸಲು ಮುಂದಾದ ರಾಹುಲ್ ಎಂಬುವವರ ಮೇಲೆಯೂ ಕೊಡಗೋಲಿನಿಂದ ಹಲ್ಲೆ ನಡೆಸಿ ಗಾಯಗೊಳಿಸಿದ ಆರೋಪಿಗಳು ನಂತರ ಸ್ಥಳದಿಂದ ಪರಾರಿಯಾಗಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ರಾಮರಾಜನ್ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಆರ್.ಬಿ. ಬಸರಗಿ ಹಾಗೂ ಬೈಲಹೊಂಗಲ ಡಿವೈಎಸ್‌ಪಿ ಡಾ. ವೀರಯ್ಯ ಹಿರೇಮಠ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

ಸಿಪಿಐ ಶಿವಾನಂದ ಬಿ. ಗುಡಗನಟ್ಟಿ, ಪಿಎಸ್‌ಐ ಭರತ್ ಎಸ್., ಪಿಎಸ್‌ಐ ಜಿ.ಜಿ. ಹಂಪಣ್ಣವರ ಹಾಗೂ  ಪೋಲಿಸ ಸಿಬ್ಬಂದಿ ವರ್ಗದವರು ಕಾರ್ಯಾಚರಣೆ ನಡೆಸಿ, ಸೆಪ್ಟೆಂಬರ್ 18 ರಂದು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಳಿಕ ಆರೋಪಿಗಳನ್ನು ಕಾರ್ಯಾಗ್ರಹ ಕ್ಕೆ ಕಳುಹಿಸುತ್ತಾರೆ.

ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ನಡೆಸಿದ್ದಾರೆ.

ವರದಿ : ರಾಜು ಮುಂಡೆ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್