LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಸಾಲಕ್ಕೆ ಹೆದರಿ ಪತಿ, ಇಬ್ಬರು ಮಕ್ಕಳನ್ನು ಕೊಂದು ಪತ್ನಿ ಆತ್ಮಹತ್ಯೆ ಯತ್ನ 

Advertisement
ಬೆಂಗಳೂರು: ಪತಿ, ಇಬ್ಬರು ಮಕ್ಕಳನ್ನು ಕೊಂದು ಪತ್ನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿಯಲ್ಲಿ ನಡೆದಿದೆ.

ಪತಿ ಶಿವು(32), ಮಕ್ಕಳಾದ ಚಂದ್ರಕಲಾ(11), ಉದಯ ಸೂರ್ಯ(7) ಅವರನ್ನು ಕೊಲೆ ಮಾಡಿದ ಪತ್ನಿ ಮಂಜುಳಾ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವು ಅಪಘಾತದಲ್ಲಿ ಗಾಯಗೊಂಡ ಕಾರಣ ಚಿಕಿತ್ಸೆಗೆ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಸಂಕಷ್ಟವಾಗಿದ್ದು, ದಂಪತಿ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಮಕ್ಕಳು ತಬ್ಬಲಿಗಳಾಗುತ್ತಾರೆ ಎಂದು ಅವರನ್ನು ಕೂಡ ಸಾಯಿಸಲು ದಂಪತಿ ನಿರ್ಧರಿಸಿದ್ದರು.

ಪತಿ, ಮಕ್ಕಳಿಗೆ ವೇಲ್ ನಿಂದ ಬಿಗಿದು ಕೊಲೆ ಮಾಡಿದ್ದ ಮಂಜುಳಾ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಗ್ಗ ತುಂಡಾದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಸ್ವಸ್ಥಗೊಂಡ ಮಂಜುಳಾ ಅವರನ್ನು ಹೊಸಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST