LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಖಾನಾಪುರದಲ್ಲಿ ಎಸ್‌ಐಆರ್ ಸಂಬಂಧಿಸಿದಂತೆ ತಹಶೀಲ್ದಾರ್ - ಪಿಡಿಒಗಳ ಮಧ್ಯೆ ತೀವ್ರ ಗಲಾಟೆ

Advertisement

ಬೆಳಗಾವಿ: ಜಿಲ್ಲೆಯ ಖಾನಾಪುರದಲ್ಲಿ ಎಸ್‌ಐಆರ್ (SIR) ವಿಷಯಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (PDO) ಮಧ್ಯೆ ಸಭೆಯಲ್ಲೇ ತೀವ್ರ ಗಲಾಟೆ ನಡೆದಿರುವ ಘಟನೆ ವರದಿಯಾಗಿದೆ.

ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಖಾನಾಪುರ ತಹಶೀಲ್ದಾರ್ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು.

ಸಭೆಯಲ್ಲಿ ಎಸ್‌ಐಆರ್ ವಿಷಯದ ಕುರಿತು ಚರ್ಚೆ ನಡೆಯುತ್ತಿದ್ದಾಗ, ತಹಶೀಲ್ದಾರ್ ಮತ್ತು ಪಿಡಿಒಗಳ ನಡುವೆ ಸಣ್ಣದಾಗಿ ಆರಂಭವಾದ ವಾಗ್ವಾದವು ಉಗ್ರ ರೂಪ ಪಡೆದುಕೊಂಡಿದೆ. ಮಾತಿಗೆ ಮಾತು ಬೆಳೆದು ಇಬ್ಬರೂ ಪರಸ್ಪರ ಏಕವಚನದಲ್ಲೇ ನಿಂದಿಸಿಕೊಂಡು ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ.

ಪಿಡಿಒಗಳ ಆಕ್ರೋಶ

ಘಟನೆಯಿಂದ ತೀವ್ರ ಅಸಮಾಧಾನಗೊಂಡ ಪಿಡಿಒಗಳು ತಕ್ಷಣವೇ ಸಭೆಯಿಂದ ಹೊರನಡೆದು ತಹಶೀಲ್ದಾರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

"ತಹಶೀಲ್ದಾರ್ ಅವರು ಸಭೆಯಲ್ಲಿ ತಮ್ಮ ದರ್ಪವನ್ನು ಪ್ರದರ್ಶಿಸುತ್ತಿದ್ದಾರೆ ಮತ್ತು ಅಧಿಕಾರಿಗಳನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತಿಲ್ಲ" ಎಂದು ಕೆಲವು ಪಿಡಿಒಗಳು ಗಂಭೀರವಾಗಿ ಆರೋಪಿಸಿದ್ದಾರೆ.

ತಹಶೀಲ್ದಾರ್ ಸ್ಪಷ್ಟನೆ

ಈ ಕುರಿತು ಪ್ರತಿಕ್ರಿಯಿಸಿರುವ ತಹಶೀಲ್ದಾರ್, ಪಿಡಿಒಗಳ ವಿರುದ್ಧವೇ ತಿರುಗಿಬಿದ್ದಿದ್ದಾರೆ. "ಪಿಡಿಒಗಳು ತಮಗೆ ವಹಿಸಲಾಗಿರುವ ಎಸ್‌ಐಆರ್ ಕರ್ತವ್ಯಗಳನ್ನು ಮತ್ತು ಅದಕ್ಕೆ ಸಂಬಂಧಿಸಿದ ನಿಯಮಗಳನ್ನು ಅಚ್ಚುಕಟ್ಟಾಗಿ ಪಾಲಿಸುತ್ತಿಲ್ಲ. ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ" ಎಂದು ಅವರು ಪ್ರತಿಯಾಗಿ ಆರೋಪಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ