LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಎರಡನೇ ಮದುವೆ ಪ್ರಶ್ನಿಸಿದ್ದಕ್ಕೆ ಮೊದಲ ಹೆಂಡತಿ ಬರ್ಬರ ಹತ್ಯೆ 

Advertisement
ಹಾಸನ : ಶಬರಿಮಲೆ ಯಾತ್ರೆಯಿಂದ ಹಿಂದಿರುಗಿದ ಪತಿ ತನ್ನ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ಹಾಸನದ ಆಲೂರು ತಾಲೂಕಿನಲ್ಲಿ ನಡೆದಿದೆ. ಎರಡನೇ ಮದುವೆಯನ್ನು ಪ್ರಶ್ನಿಸಿದ್ದಕ್ಕೆ ತನ್ನ ಮೊದಲ ಹೆಂಡತಿಯನ್ನು ವ್ಯಕ್ತಿ ಹತ್ಯೆ ಮಾಡಿದ್ದಾನೆ.

ಬಳಿಕ ಶವವನ್ನು ಆರೋಪಿ ನದಿಗೆ ಎಸೆದಿದ್ದು, ಜ.10ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹತ್ಯೆಯಾದವಳನ್ನು ರಾಧಾ (40) ಎಂದು ಗುರುತಿಸಲಾಗಿದೆ. ಮಹಿಳೆಯ ಪತಿ ಕುಮಾರ ಕೊಲೆಗೈದ ಆರೋಪಿಯಾಗಿದ್ದಾನೆ.

22 ವರ್ಷಗಳ ಹಿಂದೆ ಕುಮಾರ ಜೊತೆ ರಾಧಾ ವಿವಾಹವಾಗಿತ್ತು. ಆದರೆ ತನ್ನ ಮೇಲೆ ಕುಮಾರ ಅನುಮಾನ ಪಡುತ್ತಿದ್ದ ಕಾರಣ ಕಳೆದ 8 ವರ್ಷಗಳಿಂದ ಪತಿಯಿಂದ ರಾಧಾ ಬೇರೆಯಾಗಿ ವಾಸ ಮಾಡುತ್ತಿದ್ದರು.

ಈ ನಡುವೆ ಜನವರಿ ಮೊದಲ ವಾರ ಕುಮಾರ್​​ ಶಬರಿಮಲೆಗೆ ತೆರಳಿದ್ದ. ಇರುಮುಡಿ ಕಟ್ಟುವಾಗ ಪತ್ನಿ ಸ್ಥಾನದಲ್ಲಿ ಬೇರೆ ಮಹಿಳೆಯಿಂದ ಪೂಜೆ ನಡೆದಿದೆ.

ಕಾರಣ ಈ ವಿಚಾರವನ್ನು ಪ್ರಶ್ನಿಸಲು ತಾನು ವಾಸವಿದ್ದ ಹಾಸನದ ಆಡುವಳ್ಳಿಯಿಂದ ಯಡೂರು ಗ್ರಾಮಕ್ಕೆ ರಾಧಾ ಬಂದಿದ್ದರು.ಇದೇ ವಿಚಾರವಾಗಿ ಜ.10ರ ರಾತ್ರಿ 10.30ರ ಸಮಯದಲ್ಲಿ ಕುಮಾರ ಮತ್ತು ರಾಧಾ ನಡುವೆ ಜಗಳವಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಪತ್ನಿ ರಾಧಾ ಕಪಾಳಕ್ಕೆ ಕುಮಾರ ಹೊಡೆದಿದ್ದ ಕಾರಣ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಳು.

ಘಟನೆ ಬಳಿಕ ಮಧ್ಯರಾತ್ರಿ 12 ಗಂಟೆ ಸಮಯದಲ್ಲಿ ರಾಧಾ ಶವಕ್ಕೆ ಬಟ್ಟೆ ಸುತ್ತಿ ಅದನ್ನು ಬೈಕ್‌ನಲ್ಲಿ ತೆಗೆದುಕೊಂಡು ಹೋಗಿ ಹಾಸನ ಹೊರವಲಯದ ಕಂದಲಿ ಬಳಿ ಹರಿಯುವ ಯಗಚಿ ನದಿಗೆ ಕುಮಾರ ಬಿಸಾಡಿದ್ದ. ಬಳಿಕ ಘಟನೆ ಬಗ್ಗೆ ನಿನ್ನೆ ತಾನೇ ಪೊಲೀಸರಿಗೆ ಆರೋಪಿ ಮಾಹಿತಿ ನೀಡಿದ್ದು, ಇಂದು ಯಗಚಿ ನದಿಯಿಂದ ರಾಧಾ ಶವವನ್ನು ಪೊಲೀಸರು ಹೊರತೆಗೆದಿದ್ದಾರೆ. ಪ್ರಕರಣ ಸಂಬಂಧ ಸದ್ಯ ಆರೋಪಿ ಕುಮಾರ್​ನನ್ನು ಆಲೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST