LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಮಾಜಿ ಸಚಿವ, ಉಪಸಭಾಪತಿ ಸಿ. ವೀರಣ್ಣ ವಿಧಿವಶ 

Advertisement

ತುಮಕೂರು : ಮಾಜಿ ಸಚಿವ ಹಾಗೂ ವಾಲ್ಮೀಕಿ ಸಮುದಾಯದ ಪ್ರಭಾವಿ ಹಿರಿಯ ನಾಯಕ ಸಿ. ವೀರಣ್ಣ ಅವರು ನಿನ್ನೆ ರಾತ್ರಿ ಕೊರಟಗೆರೆಯ ತಮ್ಮ ತೋಟದ ಮನೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೃತರು ಇಬ್ಬರು ಗಂಡು ಮಕ್ಕಳು, ಒಬ್ಬ ಮಗಳು ಹಾಗೂ ಅಪಾರ ಬಂಧು-ಮಿತ್ರರು, ಬೆಂಬಲಿಗರನ್ನು ಅಗಲಿದ್ದಾರೆ. ಮೃತರು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರ ಮಾವ.

ರಾಜಕೀಯ ಪಯಣ

ವಕೀಲ ವೃತ್ತಿಯಿಂದ ರಾಜಕೀಯಕ್ಕೆ: ಆರಂಭದಲ್ಲಿ ವೃತ್ತಿಯಲ್ಲಿ ವಕೀಲರಾಗಿದ್ದ ವೀರಣ್ಣನವರು, ಬಳಿಕ ಸಾರ್ವಜನಿಕ ಸೇವೆಯತ್ತ ಆಕರ್ಷಿತರಾಗಿ ರಾಜಕೀಯಕ್ಕೆ ಧುಮುಕಿದ್ದರು.

ಡೆಪ್ಯೂಟಿ ಸ್ಪೀಕರ್ ಹಾಗೂ ಸಚಿವರಾಗಿ ಸೇವೆ

1983ರಲ್ಲಿ ಕರ್ನಾಟಕ ವಿಧಾನಸಭೆಯ ಉಪಸಭಾಪತಿಯಾಗಿ (ಡೆಪ್ಯೂಟಿ ಸ್ಪೀಕರ್) ಆಯ್ಕೆಯಾಗಿದ್ದರು.

1984 ರಿಂದ 1989ರವರೆಗೆ ರಾಜ್ಯ ಸರ್ಕಾರದ ವಿವಿಧ ಮಹತ್ವದ ಇಲಾಖೆಗಳಲ್ಲಿ ಸಚಿವರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST