LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಮಲಗಿದ್ದಲೇ ನಾಲ್ವರು ಕಾರ್ಮಿಕರು ಅನುಮಾನಾಸ್ಪದ ಸಾವು 

Advertisement
ಬೆಂಗಳೂರು : ಬೆಂಗಳೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಕೊಠಡಿಯಲ್ಲಿ ಮಲಗಿದ್ದ ನಾಲ್ವರು ಕಾರ್ಮಿಕರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮುತ್ಸ್ಯಂದ್ರ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಶೆಡ್ ನಲ್ಲಿ ಮಲಗಿದ್ದ ಅಸ್ಸಾಂ ಮೂಲದ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಮೃತರನ್ನು ಜಯಂತ್ ಸಿಂಧೆ , ನಿರೇಂದ್ರನಾಥ್ , ಡಾಕ್ಟರ್ ಟೈಡ್, ಧನಂಜಯ್ ಟೈಡ್ ಎಂದು ಗುರುತಿಸಲಾಗಿದೆ. ಕಾರ್ಮಿಕರು ಕೋಕೋಕೋಲಾ ವೇರ್ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಲೇಬರ್ ಶೆಡ್ ನಲ್ಲಿ ಮಲಗಿದ್ದ ಕಾರ್ಮಿಕರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಸ್ಥಳಕ್ಕೆ ಸೂಲಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST