LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಫಸಲ್‌ ಬಿಮಾ ಯೋಜನೆಯಲ್ಲಿ 30ಕೋಟಿ ರೂ. ವಂಚಿಸಿದ್ದ ಗ್ಯಾಂಗ್ ಅರೆಸ್ಟ್

Advertisement

ಬಾಗಲಕೋಟೆ : ಪ್ರಕೃತಿ ವಿಕೋಪದಿಂದ ಉಂಟಾಗುವ ಬೆಳೆಹಾನಿ ವೇಳೆ ರೈತರಿಗೆ ನೆರವಾಗಲು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆಯಲ್ಲಿ ಏಜೆಂಟರು, ವಿಮಾ ಕಂಪನಿ ನೌಕರರು, ಇಲಾಖೆಗಳ ನೌಕರರು ಸೇರಿಕೊಂಡು ಖೊಟ್ಟಿ ದಾಖಲೆ ಸೃಷ್ಟಿಸಿ ವಿಮೆ ಹಣ ಪಡೆದು ಸರ್ಕಾರಕ್ಕೆ ಸುಮಾರು ₹30 ಕೋಟಿಗೂ ಅಧಿಕ ಹಣ ವಂಚನೆ ಮಾಡಿರುವ ವ್ಯವಸ್ಥಿತ ಜಾಲ ಮುಧೋಳ ತಾಲೂಕಿನಲ್ಲಿ ಸಕ್ರಿಯಾಗಿರುವುದನ್ನು ಪತ್ತೆ ಮಾಡಿರುವ ವಿಶೇಷ ತನಿಖಾ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿ, ಉಳಿದ 9 ಜನರ ಪತ್ತೆಗೆ ಜಾಲ ಬೀಸಲಾಗಿದೆ.


ಮುಧೋಳ ತಾಲೂಕಿನಲ್ಲಿ 2020-21ನೇ ಸಾಲಿನಿಂದ 2024-25ನೇ ಸಾಲಿನವರೆಗೆ ₹30 ಕೋಟಿ ಹಾಗೂ 2025-26ನೇ ಸಾಲಿನಲ್ಲಿ ₹28.51 ಲಕ್ಷ ಸೇರಿ ಒಟ್ಟು ₹30.28 ಕೋಟಿ ವಂಚನೆ ಮಾಡಿರುವುದು ಪತ್ತೆಯಾಗಿದೆ.


ಇದರಲ್ಲಿ ಜಮೀನಿಗೆ ಬೆಳೆಹಾನಿ ಸಮೀಕ್ಷೆ ನಡೆಸಿರುವ ವಿವಿಧ ಇಲಾಖೆ ನೌಕರರು, ಗ್ರಾಮಲೆಕ್ಕಾಧಿಕಾರಿ, ಇತರರು ಶಾಮೀಲಾಗಿರುವ ಶಂಕೆ ಇದ್ದು, ಈ ನಿಟ್ಟಿನಲ್ಲಿ ತನಿಖೆ ನಡೆಸಲಾಗುತ್ತಿದೆ.


68 ಗ್ರಾಮಗಳ ವ್ಯಾಪ್ತಿ ಹೊಂದಿರುವ ಮುಧೋಳ ತಾಲೂಕಿನಲ್ಲಿ ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆ ಬೆಳೆ ವಿಮೆ ಜಾರಿಯಲ್ಲಿದೆ.


ಯೋಜನೆ ಪ್ರಕಾರ ಅಧಿಸೂಚಿತ ಬೆಳೆ ಬೆಳೆದ ಜನರು ಸರ್ಕಾರ ನಿಗದಿಪಡಿಸಿದ ವಿಮೆಯ ಕಂತನ್ನು ಪಿಕೆಪಿಎಸ್‌ ಬ್ಯಾಂಕ್‌ ಅಥವಾ ಸಾಮಾನ್ಯ ಸೇವಾ ಕೇಂದ್ರ, ಗ್ರಾಮ್ ಒನ್‌ಗಳಲ್ಲಿ ತುಂಬಿ ಸ್ವೀಕೃತಿ ಪತ್ರ ಪಡೆಯಲಾಗುತ್ತದೆ. ರೈತರ ವಂತಿಕೆ ಜೊತೆಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಸಮಪಾಲನ್ನು ರೈತರ ಪರ ವಿಮಾ ಕಂತು ಭರಿಸುತ್ತವೆ.


ಆದರೆ ಇಲ್ಲಿ ಜಮೀನಿನಲ್ಲಿ ಅಧಿಸೂಚಿತ ಬೆಳೆ ಬೆಳೆಯದೇ ಇದ್ದರೂ ಅಥವಾ ಕಡಿಮೆ ಬೆಳೆದು ಹೆಚ್ಚು ಕ್ಷೇತ್ರದಲ್ಲಿ ಬೆಳೆ ಇದೆ ಎಂದು ತೋರಿಸಿ ವಿಮೆ ಕಂತು ತುಂಬಿ ಬಳಿಕ ವಿಮೆ ಕಂಪನಿಯ ಪರಿಶೀಲನೆ ಹಾಗೂ ಬೆಳೆ ಸಮೀಕ್ಷೆ ವೇಳೆ ಪ್ರಭಾವ ಬೀರಿ ನಿಗದಿತ ಜಮೀನಿನಲ್ಲಿ ಬೇರೆ ಬೆಳೆ ಇದ್ದರೂ ವಿಮೆ ಅಧಿಸೂಚಿತ ಬೆಳೆ ಬೆಳೆಯಲಾಗಿದೆ ಎಂದು ತೋರಿಸಿ ಹಾಗೂ ಕಡಿಮೆ ಬೆಳೆಹಾನಿ ಆಗಿದ್ದರೂ ಹೆಚ್ಚಿನ ಕ್ಷೇತ್ರದಲ್ಲಿ ಬೆಳೆಹಾನಿ ಆಗಿದೆ ಎಂದು ತೋರಿಸಿ ವಿಮಾ ಕಂಪನಿಯಿಂದ ಬೆಳೆವಿಮೆ ಕ್ಲೇಮ್‌ ಮಾಡಿ ವಿಮೆ ಹಣ ಪಡೆದು ವಂಚನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.


ಮುಧೋಳ ತಾಲೂಕಿನ ಮೆಟಗುಡ್ಡ ಗ್ರಾಮದ ಕಲ್ಲಪ್ಪ ಹುಣಸಿಕಟ್ಟಿ, ಶ್ರೀನಿವಾಸ ಪಾಟೀಲ, ಕಲ್ಮೇಶ ಜುನ್ನೂರ, ಶ್ರೀನಿವಾಸ ಹುಣಸಿಕಟ್ಟಿ, ರಮೇಶ ಹುಣಸಿಕಟ್ಟಿ, ಪ್ರಶಾಂತ ಕೋಮಾರ, ಶ್ರೀಕಾಂತ ಹಲಗಲಿ ಹಾಗೂ ಮುಧೋಳ ತಾಲೂಕಿನ ಯುನಿವರ್ಸಲ್ ಸೊಂಪು ಬೆಳೆ ವಿಮಾ ಕಂಪನಿಯ ಅಧಿಕಾರಿಗಳಾದ ಯಶವಂತ, ರಾಕೇಶ, ಪ್ರಕಾಶ, ಅನೀಲ ಬೀಳಗಿ ವಿರುದ್ಧ ದೂರು ದಾಖಲಾಗಿತ್ತು. ಆರೋಪಿತರಲ್ಲಿ ನಾಲ್ವರನ್ನು ಬಂಧಿಸಿರುವ ಪೊಲೀಸರು ಉಳಿದವರ ಬಂಧನಕ್ಕೆ ಬಲೆ ಬೀಸಿದ್ದಾರೆ.


ಬಯಲಾಗಿದ್ದು ಹೇಗೆ?


2025ರ ಅಕ್ಟೋಬರ್‌ 23ರಂದು ಮುಧೋಳ ತಾಲೂಕಿನ ಮೆಟಗುಡ್ಡ ಹಾಗೂ ಗುಲಗಾಲಜಂಬಗಿ ಗ್ರಾಮದ ರೈತರು ಬೆಳೆ ವಿಮೆಯಲ್ಲಿ ಗೋಲ್‌ಮಾಲ್‌ ನಡೆದಿದೆ ಎಂದು ಬಾಗಲಕೋಟೆ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.


ಪ್ರಕರಣದ ಗಂಭೀರತೆ ಅರಿತ ಜಿಲ್ಲಾಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀಕ್ಷೆ ಮಾಡಿ ವರದಿ ಸಲ್ಲಿಸುವಂತೆ ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್ ಅವರಿಗೆ ಆದೇಶಿಸಿದ್ದರು.


ಉಪ ವಿಭಾಗಾಧಿಕಾರಿಗಳ ಆದೇಶದ ಮೇರೆಗೆ ಮುಧೋಳ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಸಿದ್ಧಲಿಂಗೇಶ ದೊಡಮನಿ ವಿಮಾ ಕಂಪನಿಯ ನಾಲ್ವರು ನೌಕರರು ಸೇರಿದಂತೆ ಒಟ್ಟು 11 ಜನರ ವಿರುದ್ಧ ಮಾ.10ರಂದು ಮುಧೋಳ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದರು.


ಬಳಿಕ ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ ಹಾಗೂ ಯುನಿವರ್ಸಲ್ ಸೊಂಪು ಬೆಳೆ ವಿಮಾ ಕಂಪನಿಯ ಅಧಿಕಾರಿ, ಸಿಬ್ಬಂದಿ ಜಂಟಿ ಸಮೀಕ್ಷೆ ತಂಡ ರಚಿಸಿ, 2025ನೇ ಸಾಲಿನ ಮುಂಗಾರಿನಲ್ಲಿ ಮುಧೋಳ ತಾಲೂಕಿನ ಬೆಳೆ ವಿಮೆಗೆ ನೋಂದಾಯಿಸಿದ ಮೆಕ್ಕೆಜೋಳ ಹಾಗೂ ಈರುಳ್ಳಿ ಬೆಳೆ ತಾಕು ಪರಿಶೀಲಿಸಿ ವರದಿ ನೀಡುವಂತೆ ಸೂಚನೆ ನೀಡಲಾಗಿತ್ತು.


ಜಂಟಿ ತಪಾಸಣೆ ತಂಡ ಕ್ಷೇತ್ರ ಭೇಟಿ ಮಾಡಿ ನೀಡಿರುವ ವರದಿಯಲ್ಲಿ ತಾಲೂಕಿನ ಒಟ್ಟು 19 ಗ್ರಾಮಗಳಲ್ಲಿ ಮೆಕ್ಕೆಜೋಳ ಬೆಳೆಗೆ 2102 ಜನರು ಬೆಳೆ ವಿಮೆಗೆ ನೋಂದಾಯಿಸಿದ್ದು, ಈ ಪೈಕಿ ಕೇವಲ 144 ರೈತರ ಬೆಳೆವಿಮೆ ಪರಿಶೀಲನೆ ವೇಳೆ ಹೊಂದಾಣಿಕೆ ಆಗಿದೆ. 1628 ರೈತರ ಬೆಳೆವಿಮೆ, ಬೆಳೆ ಸಮೀಕ್ಷೆ ಮತ್ತು ಜಂಟಿ ಸಮೀಕ್ಷೆಯಲ್ಲಿ ಹೊಂದಾಣಿಕೆ ಆಗಿಲ್ಲ. 330 ರೈತರದ್ದು ಬೆಳೆವಿಮೆ ಮತ್ತು ಬೆಳೆ ಸಮೀಕ್ಷೆಯಲ್ಲಿ ಹೊಂದಾಣಿಕೆ ಕಂಡು ಬಂದಿದೆ. ಜಂಟಿ ಸಮೀಕ್ಷೆಯಲ್ಲಿ ಬೇರೆ ಬೆಳೆ ಇರುವುದು ಕಂಡು ಬಂದಿದೆ.


ಹೇಗೆ ವಂಚನೆ?:


ಆರೋಪಿಗಳ ವಿಚಾರಣೆ ವೇಳೆ ವಿಮಾ ಕಂಪನಿ ಏಜೆಂಟರು ರೈತರನ್ನು ಸಂಪರ್ಕಿಸಿ ಅವರ ಜಮೀನು ದಾಖಲೆಗಳು, ಪಾಸ್‌ಬುಕ್‌, ಆಧಾರ್‌ ಮಾಹಿತಿ ಸಂಗ್ರಹಿಸಿ ಪ್ರಿಮಿಯಂ ಹಣ ತುಂಬಿ ಬಳಿಕ ಸಮೀಕ್ಷೆ ವೇಳೆ ವಿವಿಧ ಹಂತದಲ್ಲಿ ಪ್ರಭಾವ ಬೀರಿ ಬೆಳೆವಿಮೆ ಮಂಜೂರಾಗುವಂತೆ ಮಾಡುತ್ತಿದ್ದರು. ಬಳಿಕ ಬಂದ ಹಣದಲ್ಲಿ ಶೇ.50ರಷ್ಟು ಕಮೀಷನ್‌ ಪಡೆದು ಎಲ್ಲರೂ ಹಂಚಿಕೊಳ್ಳುತ್ತಿದ್ದರು ಎಂಬ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ