LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಗೌರಿ-ಗಣೇಶ ಹಬ್ಬ : 2,400 ವಿಶೇಷ ಹೆಚ್ಚುವರಿ ಬಸ್‌ಗಳನ್ನ ಓಡಿಸಲು ಸಕಲ ಸಿದ್ಧತೆ

Advertisement

ಬೆಂಗಳೂರು: ಗೌರಿ-ಗಣೇಶ ಹಬ್ಬ ಹಾಗೂ ವಾರಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ ಮತ್ತು ಹೊರ ರಾಜ್ಯಗಳಿಗೆ ಒಟ್ಟು 2,400 ವಿಶೇಷ ಹೆಚ್ಚುವರಿ ಬಸ್‌ಗಳನ್ನು ಓಡಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ.

ಸೆಪ್ಟೆಂಬರ್ 12 ಮತ್ತು 13ರ ವಾರಾಂತ್ಯ ಹಾಗೂ ಸೆಪ್ಟೆಂಬರ್ 14ರಂದು ಗಣೇಶ ಚತುರ್ಥಿ ಇರುವ ಕಾರಣ, ಸೆಪ್ಟೆಂಬರ್ 11ರಿಂದ 13ರವರೆಗೆ ಬೆಂಗಳೂರಿನಿಂದ ಹೊರಡುವ ವಿಶೇಷ ಬಸ್‌ಗಳು ಸಂಚರಿಸಲಿವೆ. ಬಳಿಕ ಸೆಪ್ಟೆಂಬರ್ 14ರಿಂದ ರಾಜ್ಯದ ವಿವಿಧ ಊರುಗಳು ಮತ್ತು ಅಂತರರಾಜ್ಯಗಳಿಂದ ಬೆಂಗಳೂರಿಗೆ ಹಿಂದಿರುಗುವ ವಿಶೇಷ ಬಸ್‌ಗಳ ಸೇವೆ ಲಭ್ಯವಿರಲಿದೆ.

ಪ್ರಮುಖ ಬಸ್ ನಿಲ್ದಾಣಗಳಿಂದ ಮಾರ್ಗಗಳ ಹಂಚಿಕೆ

ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಬೆಂಗಳೂರಿನ ವಿವಿಧ ಪ್ರಮುಖ ನಿಲ್ದಾಣಗಳಿಂದ ಪ್ರತ್ಯೇಕ ಮಾರ್ಗಗಳ ಬಸ್‌ಗಳು ಕಾರ್ಯನಿರ್ವಹಿಸಲಿವೆ.

ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್): ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್ ಹಾಗೂ ನೆರೆ ರಾಜ್ಯದ ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಇಲ್ಲಿಂದ ವಿಶೇಷ ಬಸ್‌ಗಳು ಹೊರಡಲಿವೆ.

ಮೈಸೂರು ರಸ್ತೆ ಬಸ್ ನಿಲ್ದಾಣ: ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಹಾಗೂ ಮಡಿಕೇರಿ ಭಾಗಕ್ಕೆ ತೆರಳುವ ಬಸ್‌ಗಳು ಈ ನಿಲ್ದಾಣದಿಂದ ಸಂಚರಿಸಲಿವೆ.

ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣ (ಟಿಟಿಎಂಸಿ): ತಮಿಳುನಾಡು ಮತ್ತು ಕೇರಳ ರಾಜ್ಯಗಳ ಮಾರ್ಗಗಳಾದ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿರಾಪಳ್ಳಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಕೋಝಿಕ್ಕೋಡ್ ಮೊದಲಾದ ಕಡೆಗಳಿಗೆ ತೆರಳುವ ಎಲ್ಲಾ ಪ್ರೀಮಿಯರ್ ವಿಶೇಷ ಬಸ್‌ಗಳು ಇಲ್ಲಿಂದ ಕಾರ್ಯಾಚರಣೆ ನಡೆಸಲಿವೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್