LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಈಶ್ವರ ಖಂಡ್ರೆಗೆ ಉಪ ಮುಖ್ಯಮಂತ್ರಿ ಸ್ಥಾನ ಕೊಡಿ : ಶೃತಿ, ಸಂತೋಷ ಬಿ.ಜಿ. ಪಾಟೀಲ

Advertisement

ಭಾಲ್ಕಿ : ರಾಜ್ಯದಲ್ಲಿ ರಚನೆ ಆಗಲಿರುವ ಹೊಸ ಸರ್ಕಾರದಲ್ಲಿ ಅರಣ್ಯ, ಪರಿಸರ, ಜೀವಶಾಸ್ತç ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಭೀಮಣ್ಣಾ ಖಂಡ್ರೆ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ಕೊಡಬೇಕು ಎಂದು ಅರ್ಬನ ಬ್ಯಾಂಕ ನಿರ್ದೇಶಕಿ, ಬಸವ ಭಾಗ್ಯ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ  ಶೃತಿ ಸಂತೋಷ ಪಾಟೀಲ ಸಂಸ್ಥೆಯ ಕಾರ್ಯದರ್ಶಿ ಸಂತೋಷ ಬಿ. ಬಿ ಪಾಟೀಲ ಒತ್ತಾಯಿಸಿದ್ದಾರೆ.
ಎರಡು ಬಾರಿ ಸಚಿವರಾಗಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿರುವ ಇವರು ವಿವಿಧ ಯೋಜನೆಗಳ ಮೂಲಕ ರಾಜ್ಯದ ಅಭಿವೃದ್ಧಿಗೆ ಅವಿರತ ಶ್ರಮಿಸಿರುವ ಕ್ರಿಯಾಶೀಲ ಸಚಿವರಾಗಿದ್ದಾರೆ. ರಾಜ್ಯದಾದ್ಯಂತ ತಮ್ಮ ಬೆಂಬಲಿಗರನ್ನ ಅಭಿಮಾನಿಗಳ ಪಡೆಯನ್ನು ಹೊಂದಿರುವ ಹೆಮ್ಮೆಯ ನಾಯಕರಾಗಿದ್ದಾರೆ,  ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದಾರೆ. ಎಲ್ಲ ಜಾತಿ, ಸಮುದಾಯಗಳ ಜನರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ವಿಶೇಷತೆ ಅವರದ್ದಾಗಿದೆ. ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಬೇಕಾದ ಎಲ್ಲ ಅರ್ಹತೆಗಳೂ ಅವರಲ್ಲಿ ಇವೆ ಎಂದು ಹೇಳಿದ್ದಾರೆ.
ಬೀದರ್ ಜಿಲ್ಲೆಗೆ ಈವರೆಗೂ ಉಪ ಮುಖ್ಯಮಂತ್ರಿ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಸಾಮಾಜಿಕ ನ್ಯಾಯದ ಆಧಾರದಲ್ಲಿ ಸರ್ವರಿಗೂ ಸಮಬಾಳು ಸಮಪಾಲು ಎನ್ನುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸುವ ನಮ್ಮ ಹೆಮ್ಮೆಯ ಶಾಸಕ, ಸಚಿವರಾದ ಈಶ್ವರ ಖಂಡ್ರೆ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.  

ವರದಿ : ಸಂತೋಷ ಬಿಜಿ ಪಾಟೀಲ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST