LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಭಿವೃದ್ಧಿಗೆ ಬದ್ಧ ಸರಕಾರ : ಸಚಿವ ಡಾ.ಶರಣಪ್ರಕಾಶ ಪಾಟೀಲ

Advertisement

ಸೇಡಂ: ಬಡವರ ಹಾಗೂ ಶ್ರಮಿಕರ ಪರವಾಗಿ ಕೆಲಸ ಮಾಡಲು ನಮ್ಮ ಸರಕಾರ ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.

2024-25ನೇ ಸಾಲಿನ ಮಳೆ ಪರಿಹಾರದ ಕಾರ್ಯಕ್ರಮ ಲೆಕ್ಕ ಶೀರ್ಷಿಕೆ 5054 ರ ಅಡಿಯಲ್ಲಿ ಮಂಜೂರಾದ ಸೇಡಂ ತಾಲೂಕಿನ ಗಂಗಾರಾವಲಪಲ್ಲಿಯಿಂದ  ಶಹಾಬಾಜಪುರ ರಸ್ತೆಗೆ ಸೇತುವೆ ನಿರ್ಮಾಣ ಹಾಗೂ ರಸ್ತೆ ಸುಧಾರಣೆಯ ಅಂದಾಜು ಮೊತ್ತ 80 ಲಕ್ಷ ರೂಗಳ ಕಾಮಗಾರಿಗೆ ಭೂಮಿ ಪೂಜೆ ಹಾಗೂ ಅಡಿಗಲ್ಲು ನೆರವೇರಿಸಿ ಮಾತನಾಡಿದ ಅವರು ಗಂಗಾರಾವಲಪಲ್ಲಿ ಗ್ರಾಮದ ಅಭಿವೃದ್ಧಿಗೆ ಕಾರ್ಯಯೋಜನೆಯಲ್ಲಿ ಅನುದಾನವನ್ನಿರಿಸಿ ಸಾಕಷ್ಟು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಪ್ರತಿ ಮಳೆಗಾಲದಲ್ಲಿ ಗಂಗಾರಾವಲಪಲ್ಲಿಯ ಸೇತುವೆ ಸಂಚಾರಕ್ಕೆ ಸಮಸ್ಯೆಯಾಗುತ್ತಿತ್ತು, ಇದೀಗ 80 ಲಕ್ಷ ರೂಗಳ ಅನುದಾನದಲ್ಲಿ ಸೇತುವೆ ಕಾಮಗಾರಿ ಹಾಗೂ ರಸ್ತೆ ಸುಧಾರಣೆಗೆ ಅಡಿಗಲ್ಲು ಹಾಕಲಾಗಿದೆ‌ ಎಂದರು.

ಸೇಡಂ ಮತಕ್ಷೇತ್ರದ ಅಭಿವೃದ್ಧಿಗೆ ವಿವಿಧ ಯೋಜನೆಗಳ ಮೂಲಕ ಪ್ರಗತಿಗೆ ಪಥವನ್ನು ಸೃಷ್ಟಿಸುತ್ತಿದ್ದು, ಗಂಗಾರಾವಲಪಲ್ಲಿಯ ಜನರ ಪ್ರೀತಿ, ಪ್ರೋತ್ಸಾಹ ಸದಾ ಬೆಂಬಲಬಾಗಿರಲಿ ಎಂದು ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಅನೇಕ ಮುಖಂಡರು ಹಾಗೂ ಅಧಿಕಾರಿ ವರ್ಗದವರು, ಗಂಗಾರಾವಲಪಲ್ಲಿ ಪ್ರಮುಖರು ಉಪಸ್ಥಿತರಿದ್ದರು.

ವರದಿ ವೆಂಕಟಪ್ಪ ಕೆ ಸುಗ್ಗಾಲ್.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ