LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಬೆಳಗಾವಿಯಲ್ಲಿ ಗುಂಡಿನ ಸದ್ದು : ರಮ್ಮಿ ಆಡುತ್ತಿದ್ದವನ ಹತ್ಯೆಗೆ ಯತ್ನ 

Advertisement

ಬೆಳಗಾವಿ : ನಗರದ ಪೊಲೀಸ್ ಕಮೀಷನರ್ ಕಚೇರಿ ಸಮೀಪದ ಜಿಮಖಾನಾ ಕ್ಲಬ್‌ನಲ್ಲಿ (Gymkhana club) ಮಂಗಳವಾರ ರಾತ್ರಿ ನಡೆದ ಗುಂಡಿನ (Firing) ದಾಳಿಯಿಂದ ಆತಂಕದ ವಾತಾವರಣ ನಿರ್ಮಾಣವಾಯಿತು. ರಮ್ಮಿ ಆಡುತ್ತಿದ್ದ ವೇಳೆ ಸುರೇಶ್ ಜಾಲಗಾರ ಎಂಬಾತನ ಮೇಲೆ ದುಷ್ಕರ್ಮಿಗಳು ಹತ್ಯೆಗೆ ಯತ್ನ ನಡೆಸಿದ್ದಾರೆ.

ಐವರು ಆರೋಪಿಗಳು ಜಿಮಖಾನಾ ಕ್ಲಬ್‌ಗೆ ಬಂದಿದ್ದು, ಇಬ್ಬರು ಹೊರಗೆ ಕಾವಲು ನಿಂತರೆ, ಮೂವರು ಒಳ ಪ್ರವೇಶಿಸಿ ಸುರೇಶ್ ಜಾಲಗಾರನ ಮೇಲೆ ದಾಳಿ ನಡೆಸಿದ್ದಾರೆ. ಆರೋಪಿಗಳು ಮೊದಲು ಗನ್‌ನಿಂದ ತಲೆಗೆ ಹೊಡೆದು, ಬಳಿಕ ಗುಂಡು ಹಾರಿಸಲು ಯತ್ನಿಸಿದ್ದಾರೆ. ಆದರೆ ಸುರೇಶ್ ಅವರನ್ನು ತಳ್ಳಿ ತಪ್ಪಿಸಿಕೊಂಡು ಸ್ಥಳದಿಂದ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸುರೇಶ್ ಹೊರಗೆ ಓಡಿ ಹೋದ ಬಳಿಕ ಆರೋಪಿಗಳು ಕ್ಲಬ್‌ನಿಂದ ಹೊರಬಂದು ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಘಟನೆಯಿಂದ ಕೆಲಕಾಲ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು.

ಘಟನಾ ಸ್ಥಳಕ್ಕೆ ನಗರ ಪೊಲೀಸ್ ಕಮೀಷನರ್ ಭೂಷಣ್ ಬೊರಸೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದೇ ವೇಳೆ ಪೊಲೀಸರು ಸುರೇಶ್ ಜಾಲಗಾರನನ್ನು ವಶಕ್ಕೆ ಪಡೆದು ಕ್ಯಾಂಪ್ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರು.

ಈ ಹಿಂದೆ ನಾನು ಪ್ರಫುಲ್ ಪಾಟೀಲ್ ಎಂಬಾತನ ಮೇಲೆ ಫೈರಿಂಗ್ ಮಾಡಿದ್ದೆ. ಅದೇ ಪ್ರಕರಣದ ಸೇಡು ತೀರಿಸಿಕೊಳ್ಳಲು ಪ್ರಫುಲ್ ಪಾಟೀಲ್ ಕಡೆಯವರು ನನ್ನ ಮೇಲೆ ಹತ್ಯೆಗೆ ಯತ್ನ ನಡೆಸಿದ್ದಾರೆ" ಎಂದು ಸುರೇಶ್ ಜಾಲಗಾರ ಪೊಲೀಸರಿಗೆ ತಿಳಿಸಿದ್ದಾನೆ. ಈ ಕುರಿತು ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST