LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಉತ್ತಮ ಸಮಾಜಕ್ಕೆ ಆರೋಗ್ಯವಂತ ಜನರೇ ಆಸ್ತಿ: ಶ್ರೀ ವಿಜಯಕುಮಾರ್

Advertisement

ಮಲ್ಲಮ್ಮನ ಬೆಳವಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಬೆಳಗಾವಿ 1  ಜಿಲ್ಲೆಯ ಬೈಲಹೊಂಗಲ ಯೋಜನಾ ಕಚೇರಿ ವ್ಯಾಪ್ತಿಯ   ಬೆಳವಡಿ ವಲಯ ಮೂಗಬಸವ ಕಾರ್ಯಕ್ಷೇತ್ರದ ಶ್ರೀ ಮೂಗಬಸವೇಶ್ವರ  ಜ್ಞಾನವಿಕಾಸ ಕೇಂದ್ರದಲ್ಲಿ ಮತ್ತು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಎಸ್ ಡಿ ಎಂ  ನಾರಾಯಣ ಹೃದಯಾಲಯ ಆಸ್ಪತ್ರೆ ಧಾರವಾಡ  ಶ್ರೀ ಸಾಯಿ ದೀಪ ಕಣ್ಣಿನ ಆಸ್ಪತ್ರೆ  ಶ್ರೀ ಆರ್ತೋ   ಆಸ್ಪತ್ರೆ  ಬೆಳಗಾವಿ ಈವರ ಸಹಯೋಗದಲ್ಲಿ  ಉಚಿತ  ಹೃದಯ ತಪಾಸಣೆ ,ಕಣ್ಣಿನ ತಪಾಸಣೆ ಮತ್ತು ಎಲಬು ಕೀಲು . ಬಿಪಿ ಶುಗರ್ ತಪಾಸಣೆ   ಶಿಬಿರವನ್ನು  ಶ್ರೀ ಮೂಗ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಂಡಿದ್ದು.ಈ ಕಾರ್ಯಕ್ರಮದ ಉದ್ಘಾಟನೆಯನ್ನು  ಗ್ರಾಮ ಪಂಚಾಯಿತಿ   ಮಾಜಿ ಅಧ್ಯಕ್ಷರಾದ ಶ್ರೀಮತಿ ಭಾರತಿ ಬಸಯ್ಯ ಪೂಜಾರ ಕಾರ್ಯಕ್ರಮದ ಉದ್ಘಾಟಕರಾಗಿ ಸಂಗಪ್ಪ ಹುಲ್ಲೂರು ,ಅಧ್ಯಕ್ಷರು ,ಪಿ ಕೆ ಪಿ ಎಸ್ ತಾಲೂಕಿನ ಮಾನ್ಯ ಯೋಜನಾಧಿಕಾರಿಗಳಾದ ವಿಜಯಕುಮಾರ್,ಬಾಬು ಇಟಗಿ ಉಪಾಧ್ಯಕ್ಷರು, ಪಿ ಕೆ ಪಿ ಎಸ್. ಮೂಗಬಸವ,ಮಹಾಂತೇಶ ಅಬ್ಬಾಯಿ, ಪರಮೇಶ್ವರ ಲಿಂಗದಳ್ಳಿ, ಬಸವರಾಜ ಹೊಂಡೆದ,ಡಾ. ಪ್ರಕಾಶ್ ವೈದ್ಯರು, ಎಸ್ ಡಿ ಎಂ ನಾರಾಯಣ ಹೃದಯಾಲಯ ,ಧಾರವಾಡ, ಶ್ರೀ ಸಾಯಿ ದೀಪ ಕಣ್ಣಿನ  ಅಸ್ಪತ್ರೆ ಬೆಳಗಾವಿ ,ಶ್ರೀ ಆರ್ತೋ  ಆಸ್ಪತ್ರೆ ಬೆಳಗಾವಿ ಸಿಬ್ಬಂದಿಗಳು ಇವರ ಸಮ್ಮುಖದಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಶುಭ ಚಾಲನೆ ನೀಡಿದರು.

ಕಾರ್ಯಕ್ರಮದ  ಮುಖ್ಯ ಅತಿಥಿ ಗಳಾದ ಬಾಬು ಇಟಗಿ ಇವರು  ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಾಡದಿರುವ ಕಾರ್ಯಗಳ ಬಗ್ಗೆ ಹಾಗೂ ಅದರ ಸದುಪಯೋಗ ಬಗ್ಗೆ, ಆರೋಗ್ಯ ತಪಾಸಣೆ ಶಿಬಿರಗಳು  ಇಂತಹ ಹತ್ತಾರು ಕಾರ್ಯಕ್ರಮಗಳನ್ನು ಕೈಗೊಂಡಿದೆ, ಪೂಜ್ಯ ವೀರೇಂದ್ರ ಹೆಗ್ಗಡೆ ಅವರು ಬಡವರಿಗೆಂದೇ ಇಂತಹ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ಕಾರ್ಯಕ್ರಮಗಳ ಉಪಯೋಗ ಎಲ್ಲರೂ ಪಡೆದುಕೊಳ್ಳಬೇಕು,ಮಹಿಳೆಯರು ಆರ್ಥಿಕವಾಗಿ ಸಬಲೀಕರಣ ಹೊಂದುದರೊಂದಿಗೆ ಕುಟುಂಬ ನಿರ್ವಹಣೆಯನ್ನು  ಜಾಣ್ಮೆಯಿಂದ ನಿರ್ವಹಿಸುವುದು ಅಗತ್ಯವಾಗಿದೆ. ಹಾಗೂ ಎಲ್ಲರೂ ಅನಾವಶ್ಯಕ ಖರ್ಚು ಮಾಡದೆ ಸ್ವ ಉದ್ಯೋಗ ರೂಪಿಸಿಕೊಂಡು ಸ್ವಾವಲಂಬಿಯಾಗಿ ಜೀವನ ನಡೆಸಿ,ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಇಡೀ ಕರ್ನಾಟಕದಾದ್ಯಂತ ವ್ಯಾಪಿಸಿದ್ದು ಅದೆಷ್ಟೋ ಕುಟುಂಗಳಿಗೆ ದಾರಿದೀಪವಾಗಿದೆ.ತಮ್ಮ ಅವಶ್ಯಕತೆಗೆ ಪೂರಕವಾಗಿ ಸಾಲ ಸೌಲಭ್ಯಗಳನ್ನು ಪಡೆದು ಅಭಿವೃದ್ಧಿ ಹೊಂದಬೇಕು ಎಂದು ತಿಳಿಸಿದರು.  

ತಾಲೂಕಿನ ಮಾನ್ಯ ಯೋಜನಾಧಿಕಾರಿಗಳಾದ ವಿಜಯಕುಮಾರ್ ಅವರು ಯೋಜನೆ ಕಾರ್ಯಕ್ರಮಗಳ ಬಗ್ಗೆ  ಸಮುದಾಯ ಅಭಿವೃದ್ಧಿ ಮಾಶಾಸನ ವಾತ್ಸಲ್ಯ, ಸುಜ್ಞಾನಿಧಿ ಶಿಷ್ಯವೇತನ ಜಲಮಂಗಳ ಆರೋಗ್ಯ ರಕ್ಷಾ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆ ಬಗ್ಗೆ  ಕುರಿತು ಮಾಹಿತಿ ನೀಡಿದರು.ಉತ್ತಮ ಸಮಾಜಕ್ಕೆ ಆರೋಗ್ಯವಂತ ಜನರೇ ಆಸ್ತಿ ಎಂದು ಆರೋಗ್ಯದ ಮಹತ್ವ ತಿಳಿಸಿದರು.

ಕಾರ್ಯಕ್ರಮದಲ್ಲಿ 200 ಗ್ರಾಮದ ಜನರು  ಬಂದು  ಈ ಉಚಿತ ತಪಾಸಣೆಯಲ್ಲಿ ಹೃದಯ ಸಂಬಂಧಿತ ಕಾಯಿಲೆಗಳ ಪರೀಕ್ಷೆ ಮತ್ತು ಕಣ್ಣಿನ ತಪಾಸಣೆ , ಬಿ ಪಿ ಶುಗರ್ ಮತ್ತು ಎಲಬು ಕೀಲು ತಪಾಸಣೆ  ಮಾಡಿಸಲಾಯಿತು. ಈ ಸಂದರ್ಭದಲ್ಲಿ    ನಿರೂಪಣೆ ಜ್ಞಾನವಿಕಾಸ ಸಮನ್ವಯಾಧಿಕಾರಿ,ಶೈಲಾ ಸ್ವಾಗತ ವಲಯದ ಮೇಲ್ವಿಚಾರಕರು ಸಂತೋಷ್ ಧನ್ಯವಾದ ಸೇವಾ ಪ್ರತಿನಿಧಿ ಮಂಜುನಾಥ್, ಹಾಗೂ ಒಕ್ಕೂಟ ಅಧ್ಯಕ್ಷರು ,ಜ್ಞಾನ ವಿಕಾಸ  ಕೇಂದ್ರದ ಅಧ್ಯಕ್ಷರು ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು.

ವರದಿ : ದುಂಡಪ್ಪ ಹೂಲಿ    

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ