LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ : ಎಂದಿನಂತೆ ಬಸ್ ಸಂಚಾರ 

Advertisement

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಹಮ್ಮಿಕೊಂಡಿದ್ದರು ಇದೀಗ ಈ ಒಂದು ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು ಬಸ್ ಮುಷ್ಕರ ಮಾಡಬೇಡಿ ಎಂದು ರಾಜ್ಯದ ಸಾರಿಗೆ ನೌಕರರಿಗೆ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ.

ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ನೆನ್ನೆ ಪಿಐಎಲ್ ಸಲ್ಲಿಕೆಯಾಗಿತ್ತು. ಇಂದು ಹೈ ಕೋರ್ಟ್ ನಲ್ಲಿ ಈ ಒಂದು ಪಿಐಎಲ್ ವಿಚಾರಣೆ ನಡೆಯಿತು ನ್ಯಾ. ಗೋವಿಂದರಾಜ ಅವರು ವಿಚಾರಣೆ ನಡೆಸಿದರು. 

ವೇದಾವತಿ ಮತ್ತು ಲೆಕ್ಕಸಂದ್ರದ ಶ್ರೀಧರ್ ಎಂಬುವವರು PIL ಸಲ್ಲಿಸಿದರು. ನಾಳೆಯ ಸಾರಿಗೆ ನೌಕರರ ಮುಷ್ಕರ ನಿರ್ಭಂಧಿಸಲು ಮನವಿ ಮಾಡಿದ್ದರು.

ಮನೆ ಕೆಲಸದ ಮಹಿಳೆ ಹಾಗೂ ಕಟ್ಟಡ ಕಾರ್ಮಿಕ ಅರ್ಜಿ ಸಲ್ಲಿಸಿದ್ದಾರೆ. ಇವರ ಪರ ವಕೀಲ ವಿಕ್ರಂ ಹುಯಿಲಗೊಳ ವಾದಿಸಿದರು. ಪಿಐಎಲ್ ಅರ್ಜಿದಾರರ ಬಗ್ಗೆ ಹೈಕೋರ್ಟ್ ಇದೆ ವೇಳೆ ಅಚ್ಚರಿ ವ್ಯಕ್ತಪಡಿಸಿತು.

ವಿಚಾರಣೆ ನಡೆಸಿದ ಬಳಿಕ ಬಸ್ ಮುಷ್ಕರ ಮಾಡಬೇಡಿ ಎಂದು ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು, ಸಾರಿಗೆ ಸಂಘಟನೆಗಳೊಂದಿಗೆ ಸರ್ಕಾರ ಚರ್ಚೆ ನಡೆಸಲಿ. ಮುಷ್ಕರ ನಡೆಸದಂತೆ ಸಾರಿಗೆ ಸಂಘಟನೆಗಳಿಗೆ ಹೈ ಕೋರ್ಟ್ ಇದೀಗ ನಿರ್ಬಂಧ ವಿಧಿಸಿದೆ. 

ಬಳಿಕ ಸರ್ಕಾರ ಮತ್ತು ಸಾರಿಗೆ ಸಂಘಟನೆಗಳಿಗೆ ಹೈ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಸಾರಿಗೆ ಸಚಿವರೊಂದಿಗೆ ಸಭೆ ನಡೆಸಲು ಹೈಕೋರ್ಟ್ ಸೂಚನೆ ನೀಡಿತು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ