LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್ಐವಿ ಟೆಸ್ಟ್ ಕಡ್ಡಾಯ 

Advertisement

ಬೆಂಗಳೂರು: ರಾಜ್ಯದ ಯುವಜನರಲ್ಲಿ ಎಚ್‌ಐವಿ ಸೋಂಕು(HIV infection) ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರ(Government of Karnataka) ಅತ್ಯಂತ ಕಠಿಣ ಹಾಗೂ ಜಾಗರೂಕತೆಯ ಕ್ರಮಕ್ಕೆ ಮುಂದಾಗಿದೆ. 

ರಾಜ್ಯದ ಎಲ್ಲಾ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಎಚ್‌ಐವಿ (HIV) ತಪಾಸಣೆ ನಡೆಸಲು ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಜಂಟಿಯಾಗಿ ತೀರ್ಮಾನಿಸಿವೆ.

ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ: ಆತಂಕಕಾರಿ ವರದಿ

ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿಗಳ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ.

ಪ್ರಸ್ತುತ ರಾಜ್ಯದಲ್ಲಿ ಸುಮಾರು 2.60 ಲಕ್ಷ ಎಚ್‌ಐವಿ ಪಾಸಿಟಿವ್ ವ್ಯಕ್ತಿಗಳಿದ್ದು, ಈ ಪೈಕಿ 2.05 ಲಕ್ಷ ಮಂದಿ ಆಯಂಟಿ ರೆಟ್ರೋವೈರಲ್ ಥೆರಪಿ (ART) ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗಲಿರುವುದರ ಅರಿವೇ ಇಲ್ಲದಿರುವುದು ಆತಂಕ ಮೂಡಿಸಿದೆ.

ಯುವ ಸಮೂಹದಲ್ಲೇ ಸೋಂಕು ವೇಗವಾಗಿ ಹರಡುವಿಕೆ

ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ನೀಡಿರುವ ಅಂಕಿ-ಅಂಶಗಳ ಪ್ರಕಾರ, 18ರಿಂದ 35 ವರ್ಷದೊಳಗಿನ ಯುವಜನರಲ್ಲಿ ಈ ಸೋಂಕು ತೀವ್ರವಾಗಿ ಹರಡುತ್ತಿದೆ. 

2023-24ರಲ್ಲಿ 44,500ರಷ್ಟಿದ್ದ ಸೋಂಕಿತರ ಸಂಖ್ಯೆ 2025-26ರ ವೇಳೆಗೆ ಭಾರಿ ಏರಿಕೆ ಕಂಡು 66,600ಕ್ಕೆ ತಲುಪಿದೆ. ಇತ್ತೀಚಿನ ವರದಿಯೊಂದರ ಪ್ರಕಾರ, ಕೇವಲ 18ರಿಂದ 25 ವರ್ಷ ಪ್ರಾಯದ 7,000ಕ್ಕೂ ಹೆಚ್ಚು ಯುವಕ-ಯುವತಿಯರಲ್ಲಿ ಎಚ್‌ಐವಿ ಪತ್ತೆಯಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST