LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಕೇಸ್ : ಆರೋಪಿ ಜಾಮೀನು ಅರ್ಜಿ ವಜಾ 

Advertisement

ಧಾರವಾಡ: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಯಾಜ್‌ಗೆ ಮತ್ತೊಮ್ಮೆ ಮುಖಭಂಗವಾಗಿದೆ. ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಧಾರವಾಡ ಪೀಠವು ವಜಾಗೊಳಿಸಿದೆ.

ಈ ಹಿಂದೆ ಹುಬ್ಬಳ್ಳಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿ ಫಯಾಜ್‌ನ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ಜಿಲ್ಲಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹಾಗೂ ತನಗೆ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಆರೋಪಿ ಹೈಕೋರ್ಟ್ ಧಾರವಾಡ ಪೀಠದ ಮೆಟ್ಟಿಲೇರಿದ್ದನು. 

ಹೈಕೋರ್ಟ್‌ನಲ್ಲಿ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠವು, ಪ್ರಕರಣದ ಗಾಂಭೀರ್ಯತೆಯನ್ನು ಪರಿಗಣಿಸಿ ಆರೋಪಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ.

ಕೊಲೆಯಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಪರವಾಗಿ ಹಿರಿಯ ನ್ಯಾಯವಾದಿ ರಾಘವೇಂದ್ರ ಮುತ್ತಗಿ ಅವರು ವಾದ ಮಂಡಿಸಿದರು.

ಆರೋಪಿ ಮಾಡಿರುವ ಕೃತ್ಯ ಅತ್ಯಂತ ಕ್ರೂರವಾಗಿದ್ದು, ಆತನಿಗೆ ಜಾಮೀನು ನೀಡಿದರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಮತ್ತು ಸಾಕ್ಷ್ಯ ನಾಶಪಡಿಸುವ ಸಾಧ್ಯತೆಯಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಈ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಮತ್ತೊಂದೆಡೆ ಕಾಲೇಜು ಆವರಣದಲ್ಲೇ ಸಾರ್ವಜನಿಕವಾಗಿ ನಡೆದಿದ್ದ ಈ ಭೀಕರ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದೆ.

2024ರ ಏಪ್ರಿಲ್ 18 ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ 24 ವರ್ಷದ ಎಂಸಿಎ ವಿದ್ಯಾರ್ಥಿನಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರನ್ನು ಆರೋಪಿ ಫಯಾಜ್ ಅಡ್ಡಗಟ್ಟಿ, ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ನೇಹಾಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿದ್ದ. 10 ಕ್ಕೂ ಹೆಚ್ಚು ಬಾರಿ ಇರಿತಕ್ಕೊಳಗಾದ ನೇಹಾ ಕಾಲೇಜು ಆವರಣದಲ್ಲಿಯೇ ಸಾವನ್ನಪ್ಪಿದ್ದಳು. ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಫಯಾಜ್ ನನ್ನು ಕೆಲವೇ ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ