LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Business News

ಒಂದೇ ದಿನದಲ್ಲಿ ಚಿನ್ನದ ದರದಲ್ಲಿ ಭಾರೀ ಏರಿಕೆ

Advertisement
ಬೆಂಗಳೂರು: ಜಾಗತಿಕ ಮಾರುಕಟ್ಟೆಯಲ್ಲಿನ ಬೆಳವಣಿಗೆಗಳ ಪರಿಣಾಮವಾಗಿ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ (Gold) ಮತ್ತು ಬೆಳ್ಳಿಯ (Silver) ದರ ಬುಧವಾರ ಭಾರಿ ಏರಿಕೆ (Price hike) ಕಂಡಿದೆ.

ಕೇವಲ ಒಂದೇ ದಿನದಲ್ಲಿ ಬೆಳ್ಳಿಯ ಬೆಲೆ 9,000 ರೂಪಾಯಿಗಳಷ್ಟು ಜಿಗಿದಿದ್ದರೆ, ಚಿನ್ನದ ಬೆಲೆ 3,500 ರೂಪಾಯಿಗಳಷ್ಟು ಏರಿಕೆಯಾಗಿ ಹೂಡಿಕೆದಾರರಲ್ಲಿ ಅಚ್ಚರಿ ಮೂಡಿಸಿದೆ.

ಅಖಿಲ ಭಾರತ ಸರಾಫಾ ಅಸೋಸಿಯೇಷನ್ ನೀಡಿರುವ ಮಾಹಿತಿಯ ಪ್ರಕಾರ, ಬೆಳ್ಳಿಯ ದರವು ಪ್ರತಿ ಕೆಜಿಗೆ 2.46 ಲಕ್ಷ ರೂಪಾಯಿ ತಲುಪಿದೆ.

ಸೋಮವಾರದ ವಹಿವಾಟಿನಲ್ಲಿ 2.37 ಲಕ್ಷ ರೂಪಾಯಿ ಇದ್ದ ಬೆಳ್ಳಿ ಬೆಲೆ ಈಗ ಶೇ. 3.8 ರಷ್ಟು ಹೆಚ್ಚಳವಾಗಿದೆ.

ಇನ್ನು ಚಿನ್ನದ ವಿಚಾರಕ್ಕೆ ಬಂದರೆ, 99.9 ಪ್ರತಿಶತ ಶುದ್ಧತೆಯ ಚಿನ್ನದ ಬೆಲೆ 10 ಗ್ರಾಂಗೆ 3,500 ರೂಪಾಯಿ ಏರಿಕೆಯಾಗಿ 1,55,000 ರೂಪಾಯಿ ತಲುಪಿದೆ.

ಮಂಗಳವಾರ ಮಹಾವೀರ ಜಯಂತಿ ನಿಮಿತ್ತ ಮಾರುಕಟ್ಟೆಗೆ ರಜೆ ಇದ್ದ ಕಾರಣ, ಬುಧವಾರ ವಹಿವಾಟು ಆರಂಭವಾಗುತ್ತಿದ್ದಂತೆಯೇ ಬೆಲೆ ಏರಿಕೆಯ ಬಿಸಿ ತಟ್ಟಿದೆ.

ಬೆಲೆ ಏರಿಕೆಗೆ ಕಾರಣವೇನು?

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿದ್ದ ಉದ್ವಿಗ್ನತೆ ತಿಳಿಯಾಗುತ್ತಿರುವ ಲಕ್ಷಣಗಳು ಕಂಡುಬರುತ್ತಿವೆ. ಇದು ತೈಲ ಬೆಲೆ ಇಳಿಕೆಯ ನಿರೀಕ್ಷೆ ಮೂಡಿಸಿದ್ದು, ಹಣದುಬ್ಬರದ ಆತಂಕವನ್ನು ಕಡಿಮೆ ಮಾಡಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಬ್ಯಾಂಕುಗಳು ಬಡ್ಡಿದರ ಏರಿಕೆ ಮಾಡುವ ಸಾಧ್ಯತೆ ಕಡಿಮೆ ಇರುವುದರಿಂದ ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾಗಿ ಚಿನ್ನದತ್ತ ಮುಖ ಮಾಡಿದ್ದಾರೆ.

ಇದರ ಜೊತೆಗೆ, ಇರಾನ್ ಸಂಘರ್ಷದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಲಿರುವ ಭಾಷಣದ ಮೇಲೂ ಮಾರುಕಟ್ಟೆಯ ಕಣ್ಣಿದೆ.

2025-26ರ ಹಣಕಾಸು ವರ್ಷದಲ್ಲಿ ಚಿನ್ನ ಮತ್ತು ಬೆಳ್ಳಿ ಹೂಡಿಕೆದಾರರಿಗೆ ಭರ್ಜರಿ ಲಾಭ ತಂದುಕೊಟ್ಟಿವೆ. ಕಳೆದ ವರ್ಷ ಏಪ್ರಿಲ್ 1ರಂದು 10 ಗ್ರಾಂಗೆ 94,150 ರೂಪಾಯಿ ಇದ್ದ ಚಿನ್ನ, ಈಗ ಸುಮಾರು ಶೇ. 61 ರಷ್ಟು (57,350 ರೂ.) ಏರಿಕೆ ಕಂಡಿದ್ದರೆ, ಬೆಳ್ಳಿಯು ಹೂಡಿಕೆದಾರರಿಗೆ ಶೇ. 131 ಕ್ಕೂ ಹೆಚ್ಚು ಲಾಭ ನೀಡಿದೆ. ಕಳೆದ ಒಂದು ವರ್ಷದಲ್ಲಿ ಬೆಳ್ಳಿ ಬೆಲೆ ಬರೋಬ್ಬರಿ 1,34,500 ರೂಪಾಯಿಗಳಷ್ಟು ಹೆಚ್ಚಳವಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ