LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಖಾತೆ ಬಗ್ಗೆ ನನಗೆ ಸಂತೋಷವೂ ಇಲ್ಲ, ದುಃಖವೂ ಇಲ್ಲ : ಸತೀಶ್ ಜಾರಕಿಹೊಳಿ 

Advertisement

ಬೆಂಗಳೂರು: ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ರಚನೆಯ ಬೆನ್ನಲ್ಲೇ ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನ ಭುಗಿಲೆದ್ದಿದ್ದು, ಸಚಿವ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದಾರೆ. ಮತ್ತೊಂದೆಡೆ ಖಾತೆ ಹಂಚಿಕೆ ಬಗ್ಗೆ ಸಚಿವ ಕೆ.ಹೆಚ್.ಮುನಿಯಪ್ಪ ಕೂಡ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ತಮಗೆ ಸಿಕಿರುವ ಖಾತೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಸಮಚಿತ್ತದ ನಿಲುವು ವ್ಯಕ್ತಪಡಿಸಿದ್ದಾರೆ.

ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ಕೊಟ್ಟಿದ್ದಾರೆ ಅಷ್ಟೇ. ಆದರೆ ಈ ಇಡೀ ಪರಿಸ್ಥಿತಿಯನ್ನು ಸಮಾಧಾನಪಡಿಸುವ ಹಾಗೂ ಪರ್ಯಾಯ ವ್ಯವಸ್ಥೆ ಮಾಡುವ ಸಂಪೂರ್ಣ ಸಾಮರ್ಥ್ಯ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಇದೆ. ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ಈ ಎಲ್ಲ ಸಮಸ್ಯೆಗಳು ಸರಿಹೋಗುತ್ತವೆ ಎಂದರು.

ಸಚಿವ ಕೆ.ಎಚ್. ಮುನಿಯಪ್ಪ ಅವರ ಅಸಮಾಧಾನದ ಕುರಿತು ಮಾತನಾಡಿದ ಅವರು, ರಾಜಕಾರಣದಲ್ಲಿ ಪ್ರಮೋಷನ್ ಅಥವಾ ಉನ್ನತ ಹುದ್ದೆಗಳ ಬಯಕೆ ಇರುವುದು ಎಲ್ಲರಿಗೂ ಇರುತ್ತದೆ. 

ಅದು ತೀರಾ ಸಾಮಾನ್ಯ. ಆದರೆ ಎಲ್ಲರಿಗೂ ಉನ್ನತ ಸ್ಥಾನಗಳನ್ನು ನೀಡಲು ಸಾಧ್ಯವಿಲ್ಲ, ಕೆಲವರಿಗೆ ಮಾತ್ರ ಅದು ಲಭ್ಯವಾಗುತ್ತದೆ. ಈ ಎಲ್ಲ ಗೊಂದಲಗಳನ್ನು ಸಿಎಂ ಬಗೆಹರಿಸಲಿದ್ದಾರೆ, ಅಲ್ಲಿಯವರೆಗೆ ಒಂದು-ಎರಡು ದಿನ ಕಾಯೋಣ ಎಂದರು.

ನಿಮಗೆ ಡಿಸಿಎಂ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗದಿರುವುದು ಅಸಮಾಧಾನ ತಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸತೀಶ್ ಕಾರಕಿಹೊಳಿ, ಆಸೆ ಇತ್ತು, ಆದರೆ ಏನು ಮಾಡಲಿಕ್ಕೆ ಆಗಲ್ಲ. ಸಿಕ್ಕಿದ್ದಕ್ಕೆ ಸಮಾಧಾನ, ತೃಪ್ತಿ ಪಡಬೇಕು ಅಷ್ಟೇ ಎಂದರು. 

ನನ್ನ ಖಾತೆ ಬಗ್ಗೆ ನನಗೆ ಯಾವ ನೋವು ಇಲ್ಲ. ಯಾವ ಸಂತೋಷವೂ ಇಲ್ಲ, ದುಃಖವೂ ಇಲ್ಲ ಎಂದರು. ರಾಜೀನಾಮೆ ಯಾಕೆ ಕೊಡಬೇಕು? ಅದರ ಅವಶ್ಯಕತೆ ಇಲ್ಲ. ನಮಗೆ ಯಾವ ಖಾತೆ ಇದೆಯೋ, ಅದನ್ನೇ ಮುಂದುವರಿಸಿದ್ದಾರೆ, ನಾನು ಕೆಲಸ ಮಾಡುತ್ತೇನೆ ಎಂದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ