LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಸಚಿವೆ ಹೆಬ್ಬಾಳ್ಕರ್ ಹೆಸರಿನಲ್ಲಿ 16 ಜನರಿಗೆ ವಂಚನೆ : ಲಕ್ಷ ಲಕ್ಷ ರೂ. ಲೂಟಿ ಆರೋಪ 

Advertisement
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ 16 ಜನರಿಗೆ ವಂಚನೆ ಮಾಡಲಾಗಿದೆ. ಬೆಂಬಲಿಗ ಮಂಜುನಾಥ್ ವಿರುದ್ಧ ವಂಚನೆ ಆರೋಪವನ್ನು ಸಾಮಾಜಿಕ ಹೋರಾಟಗಾರ ಜಯಂತ್ ತಿನೇಕರ್  ತಿಳಿಸಿದರು.

 

ಅಲ್ಲದೇ ಪೊಲೀಸರು ದೂರು ಸ್ವೀಕರಿಸದ ಹಿನ್ನಲೆಯಲ್ಲಿ ಗಂದಿಗವಾಡದ ಕಾವ್ಯಾ ಯಳ್ಳೂರರಿಂದ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ 16 ಜನರಿಗೆ ವಂಚನೆ ಮಾಡಲಾಗಿದೆ. 34 ಲಕ್ಷಕ್ಕೂ ಅಧಿಕ ಹಣ ಪಡೆದು ವಂಚನೆ ಮಾಡಿದ್ದಾರೆ. ಸಾಮಾಜಿಕ ಹೋರಾಟಗಾರ ಜಯಂತ್ ತಿನೇಕರ್ ಎಂಬುವರು ಆರೋಪಿಸಿದ್ದಾರೆ.

ರಾಜ್ಯಪಾಲರ ಆದೇಶ ಎಂದು ನಕಲಿ ಪತ್ರಗಳನ್ನು ನೀಡಿ ವಂಚನೆ ಮಾಡಿದ್ದಾರೆ. ಹೆಬ್ಬಾಳ್ಕರ್ ನಕಲಿ ಸಹಿ ಮಾಡಿದ ಆದೇಶ ಪ್ರತಿ ವಿತರಿಸಿದ್ದಾರೆ. ಬೆಳಗಾವಿ, ಬೈಲಹೊಂಗಲ, ಖಾನಾಪುರ ಸೇರಿ ಹಲವೆಡೆ ವಂಚನೆ ಮಾಡಿದ್ದಾರೆ ಎಂದಿದ್ದಾರೆ.

16 ಜನರಿಂದ 34 ಲಕ್ಷಕ್ಕೂ ಹೆಚ್ಚು ಹಣ ಪಡೆದು ವಂಚನೆ ಮಾಡಲಾಗಿದೆ. ಇದರಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸಂಗನಗೌಡ ಹೆಸರು ಕೂಡ ತಳುಕು ಹಾಕಿಕೊಂಡಿದೆ. ನಾವು ಕೊಟ್ಟ ದೂರು ಪೊಲೀಸರು ಸ್ವೀಕರಿಸಿಕೊಳ್ಳುತ್ತಿಲ್ಲ ಎಂಬುದಾಗಿ ಆರೋಪಿಸಿ ಗಂದಿಗವಾಡದ ಕಾವ್ಯಾ ಯಳ್ಳೂರರಿಂದ ಕೋರ್ಟ್ ಗೆ ದೂರು ನೀಡಲಾಗಿದೆ ಎಂದು ಹೇಳಿದರು.

ವಂಚನೆ ಕುರಿತು ನಾವು ಕೋರ್ಟ್ ನಲ್ಲಿ ಕೇಸ್ ಹಾಕಿದ್ದೇವೆ. ಕಿತ್ತೂರು ಠಾಣಾ ವ್ಯಾಪ್ತಿಗೆ ಈ ಘಟನೆ ಬರದಿದ್ದರೂ ಕಿರುಕುಳ. ಕಿತ್ತೂರು ಪೊಲೀಸರಿಂದ ನಿರಂತರ ಕಿರಿಕಿರಿ ಎಂದು ಆರೋಪಿಸಲಾಗಿದೆ. ರಾಜ್ಯಪಾಲರು, ಸಿಎಂ, ಗೃಹ ಸಚಿವರಿಗೂ ದೂರು ನೀಡಿದ್ದೇವೆ ಎಂದು ಬೆಳಗಾವಿಯಲ್ಲಿ ಹೋರಾಟಗಾರ ಜಯಂತ್ ತಿನೇಕರ್ ಹೇಳಿದ್ದಾರೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ