LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಇಸ್ರೋ ಉದ್ಯೋಗ ವಂಚನೆ ಭೇದಿಸಿದ ಪೊಲೀಸರು : ವಿಜಯಪುರ ಮೂಲದ ಆರೋಪಿ ಬಂಧನ 

Advertisement

ಗದಗ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ISRO) ಉದ್ಯೋಗ ಕೊಡಿಸುವುದಾಗಿ ನಂಬಿಸಿ 30ಕ್ಕೂ ಹೆಚ್ಚು ಯುವಕ-ಯುವತಿಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ್ದ ಖತರ್ನಾಕ್ ಆಸಾಮಿಯನ್ನು ಗದಗ ಶಹರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಜಯಪುರ ಮೂಲದ ಡಿಪ್ಲೋಮಾ ವಿದ್ಯಾರ್ಥಿ ಈರಣ್ಣ ಬಡಿಗೇರ್ ಬಂಧಿತ ಆರೋಪಿಯಾಗಿದ್ದು, ಈತನಿಂದ ಮೋಸ ಹೋದ ಯುವಕರೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿ ಈರಣ್ಣ ಇನ್‌ಸ್ಟಾಗ್ರಾಂನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ, ತಾನು ಇಸ್ರೋ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಳ್ಳುತ್ತಿದ್ದ. ಕೆಲಸದ ಆಸೆಯಲ್ಲಿದ್ದ ಯುವಕ-ಯುವತಿಯರನ್ನು ಗುರಿಯಾಗಿಸಿಕೊಂಡು, ಜಾಬ್ ಆಫರ್ ನೀಡುವುದಾಗಿ ನಂಬಿಸಿ ಫೋನ್ ಪೇ ಮೂಲಕ ಲಕ್ಷಾಂತರ ರೂಪಾಯಿ ಹಣ ಹಾಕಿಸಿಕೊಂಡು ವಂಚಿಸಿದ್ದಾನೆ. ಸಾಲ ತೀರಿಸಲು ಈ ವಂಚನೆಯ ಹಾದಿ ತುಳಿದಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.

ಬಂಧಿತ ಆರೋಪಿಯ ಮೊಬೈಲ್ ಫೋನ್ ಪರಿಶೀಲಿಸಿದಾಗ ಹಲವಾರು ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಉದ್ಯೋಗದ ನೆಪದಲ್ಲಿ ಯುವತಿಯರನ್ನು ಬಲೆಗೆ ಬೀಳಿಸಿಕೊಳ್ಳುತ್ತಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿದೆ. 

ಆತನ ಬ್ಯಾಗ್‌ನಲ್ಲಿ ನಿರೋಧ್ ಪ್ಯಾಕೆಟ್‌ಗಳು ಪತ್ತೆಯಾಗಿರುವುದು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದೆ. ಈ ಜಾಲದಲ್ಲಿ ಇನ್ನೆಷ್ಟು ಮಂದಿ ಭಾಗಿಯಾಗಿದ್ದಾರೆ ಹಾಗೂ ಯುವತಿಯರ ಶೋಷಣೆ ನಡೆದಿದೆಯೇ ಎಂಬ ಕೋನದಲ್ಲಿ ಗದಗ ಶಹರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್