LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಕರ್ನಾಟಕ ಹೈಕೋರ್ಟ್ ನಲ್ಲಿ 70 ಹುದ್ದೆಗಳಿಗೆ ಅರ್ಜಿ ಆಹ್ವಾನ 

Advertisement
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಸುವರ್ಣಾವಕಾಶ ಒದಗಿದೆ.

ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು 70 ಹುದ್ದೆಗಳು ಖಾಲಿ ಇದ್ದು, ಇದರಲ್ಲಿ RPC ವಿಭಾಗಕ್ಕೆ 59 ಹಾಗೂ KKR ವಿಭಾಗಕ್ಕೆ 11 ಹುದ್ದೆಗಳು ಮೀಸಲಾಗಿವೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆಯಲಿದ್ದು, ರೂ. 44,900 ರಿಂದ 1,42,400 ವರೆಗೆ ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು, ವಿಜ್ಞಾನ, ಕಲೆ, ವಾಣಿಜ್ಯ, BBA, ಕಂಪ್ಯೂಟರ್ ಅಪ್ಲಿಕೇಶನ್ ಅಥವಾ MBA ಪದವಿ ಹೊಂದಿರಬೇಕು.

ವಯೋಮಿತಿ ಕನಿಷ್ಠ 18 ವರ್ಷದಿಂದ ಗರಿಷ್ಠ 40 ವರ್ಷವರೆಗೆ ನಿಗದಿಯಾಗಿದ್ದು, ಮೀಸಲಾತಿ ವರ್ಗಗಳಿಗೆ ಸರ್ಕಾರದ ನಿಯಮಾನುಸಾರ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ, ಸ್ಟೆನೋಗ್ರಫಿ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನಡೆಯಲಿದೆ.

ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ.ಆಸಕ್ತರು ಏಪ್ರಿಲ್ 15ರೊಳಗೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST