LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ 

Advertisement

ಬಾಗಲಕೋಟೆ: ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದ ನಿರಂತರ ನಿರ್ಲಕ್ಷ್ಯಕ್ಕೆ ಬೇಸತ್ತ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕೊಣ್ಣೂರು ಮಡ್ಡಿ ಪ್ಲಾಟ್‌ನ ನೂರಾರು ಗ್ರಾಮಸ್ಥರು ತಮ್ಮ ನ್ಯಾಯಯುತ ಹಕ್ಕುಗಳಿಗಾಗಿ ರಾಜಧಾನಿ ಬೆಂಗಳೂರಿಗೆ ಬರೋಬ್ಬರಿ 550 ಕಿಲೋಮೀಟರ್ ಸುದೀರ್ಘ ಪಾದಯಾತ್ರೆ ಆರಂಭಿಸಿದ್ದಾರೆ

ಕಳೆದ 30 ವರ್ಷಗಳಿಂದ ಸೂರು ಮತ್ತು ಹಕ್ಕುಪತ್ರಕ್ಕಾಗಿ ನಡೆಸುತ್ತಿರುವ ಹೋರಾಟಕ್ಕೆ ಜಿಲ್ಲಾಮಟ್ಟದಲ್ಲಿ ಯಾವುದೇ ನ್ಯಾಯ ಸಿಗದ ಹಿನ್ನೆಲೆಯಲ್ಲಿ ಅಂತಿಮವಾಗಿ ಮುಖ್ಯಮಂತ್ರಿಗಳ ಮೊರೆ ಹೋಗಲು ಗ್ರಾಮಸ್ಥರು ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ

ಕೊಣ್ಣೂರು ಮಡ್ಡಿ ಪ್ಲಾಟ್ ನಿವಾಸಿಗಳು ಹಕ್ಕುಪತ್ರಕ್ಕಾಗಿ ಬರೋಬ್ಬರಿ ಮೂರು ದಶಕಗಳಿಂದ ಕಾಯುತ್ತಿದ್ದಾರೆ ಕಳೆದ 8 ವರ್ಷಗಳಿಂದ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯತ್ ಹಾಗೂ ಜನಪ್ರತಿನಿಧಿಗಳ ಮನೆ ಬಾಗಿಲು ತಟ್ಟಿ ಅಲೆದಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಅಧಿಕಾರಿಗಳ ಬೇಜವಾಬ್ದಾರಿತನದಿಂದ ರೊಚ್ಚಿಗೆದ್ದಿರುವ ಗ್ರಾಮಸ್ಥರು ಇನ್ನು ಸ್ಥಳೀಯವಾಗಿ ಮನವಿ ಕೊಟ್ಟು ಪ್ರಯೋಜನವಿಲ್ಲ ರಾಜ್ಯದ ಮುಖಂಡರ ಬಳಿಯೇ ನ್ಯಾಯ ಕೇಳುತ್ತೇವೆ ಎಂದು ಪಾದಯಾತ್ರೆಗಿಳಿದಿದ್ದಾರೆ.

ಗ್ರಾಮಸ್ಥರ ಬೇಡಿಕೆಗಳು ಏನು
ಕೊಣ್ಣೂರು ಮಡ್ಡಿ ಪ್ಲಾಟ್‌ನ 300 ಬಡ ಕುಟುಂಬಗಳಿಗೆ ತಕ್ಷಣವೇ ಹಕ್ಕುಪತ್ರ ಹಾಗೂ ಇ-ಸ್ವತ್ತು ವಿತರಿಸಬೇಕು ಅರ್ಹ ನಿವಾಸಿಗಳಿಗೆ ಆಶ್ರಯ ಯೋಜನೆಯಡಿ ಮನೆಗಳನ್ನು ಮಂಜೂರು ಮಾಡಬೇಕು

ಗ್ರಾಮದ ರಸ್ತೆಗಳಿಗೆ ಡಾಂಬರೀಕರಣ ಮಾಡಿ ಮೂಲಸೌಕರ್ಯ ಒದಗಿಸಬೇಕು ಗ್ರಾಮದ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ಸರ್ಕಾರಿ ಪಿಯು ಕಾಲೇಜು ಸ್ಥಾಪಿಸಬೇಕು
ತಮ್ಮ ಹಕ್ಕುಗಳ ರಕ್ಷಣೆಗಾಗಿ ಮಹಿಳೆಯರು, ಯುವಕರು ಹಾಗೂ ವೃದ್ಧರು ಎನ್ನದೆ ನೂರಾರು ಗ್ರಾಮಸ್ಥರು ಕೈಯಲ್ಲಿ ಬುತ್ತಿ-ರೊಟ್ಟಿ ಕಟ್ಟಿಕೊಂಡು ಬೆಂಗಳೂರಿನತ್ತ ಹೆಜ್ಜೆ ಹಾಕುತ್ತಿದ್ದಾರೆ  550 ಕಿಲೋಮೀಟರ್‌ನ ಈ ಕಠಿಣ ಪಾದಯಾತ್ರೆಯು ಅಕ್ಟೋಬರ 2ರ ಗಾಂಧಿ ಜಯಂತಿಯಂದು ಬೆಂಗಳೂರು ತಲುಪುವ ನಿರೀಕ್ಷೆಯಿದೆ.

ಅಂದು ಬೆಂಗಳೂರಿನ ವಿಧಾನಸೌಧದ ಎದುರು ಬೃಹತ್ ಧರಣಿ ನಡೆಸಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರಿಗೆ ಖುದ್ದಾಗಿ ಮನವಿ ಸಲ್ಲಿಸಲಿದ್ದಾರೆ ಕೇವಲ ಆಶ್ವಾಸನೆ ನೀಡಿದರೆ ನಾವು ಮರಳುವುದಿಲ್ಲ ಸ್ಥಳದಲ್ಲೇ ನಮ್ಮ ಬೇಡಿಕೆಗಳಿಗೆ ಸಂಬಂಧಿಸಿದಂತೆ ಅಧಿಕೃತ ಸರ್ಕಾರಿ ಆದೇಶ ಪತ್ರ ಹೊರಡಿಸಿದ ನಂತರವೇ ಊರಿಗೆ ಹಿಂತಿರುಗುತ್ತೇವೆ ಎಂದು ಹೋರಾಟಗಾರರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ವರದಿ : ಬಸವರಾಜ ಪೂಜಾರಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್