LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮಕ್ಕಳ ವಿಕಾಸನಕ್ಕೆ ಕಲಿಕೆ ಹಬ್ಬ ಸಹಕಾರಿ

Advertisement
ಸಿಂಧನೂರು: ಉರ್ದು ಸಮೂಹ ಸಂಪನ್ಮೂಲ ಕೇಂದ್ರಗಳು ಎಫ್ಎಲ್‌ಎನ್, ಅಡಿಯಲ್ಲಿ ಕಲಿಕಾ ಹಬ್ಬವನ್ನು ಆಯೋಜಿಸಿ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಮತ್ತು ಶೈಕ್ಷಣಿಕ ಬಲವರ್ಧನೆಗೆ ಉತ್ತೇಜನ ನೀಡುತ್ತಿದೆ ಈ ಹಬ್ಬವು ರಸಪ್ರಶ್ನೆ ಪೋಸ್ಟರ್ ಪ್ರದರ್ಶನ ಮತ್ತು ಸಾಂಸ್ಕೃತಿಕ ಬೆಳವಣಿಗೆಗಳ ಮೂಲಕ ಮಕ್ಕಳ ಸಕ್ರಿಯ ಕಲಿಕೆಯನ್ನು ಪ್ರೋತ್ಸಾಹಿಸುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಸಲಿಂಗಪ್ಪ ಹೇಳಿದರು.

ನಗರದ ಟಿಪ್ಪು ಸುಲ್ತಾನ್ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ್,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ,ಉರ್ದು ಸಮೂಹ ಸಂಪನ್ಮೂಲ ಕೇಂದ್ರ ವತಿಯಿಂದ ಕಲಿಕಾ ಹಬ್ಬವನ್ನು ಆಯೋಜನೆ ಮಾಡಲಾಗಿತ್ತು, ಆರ್.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ, ಜೆಡಿಎಸ್ ಮುಖಂಡ ಅಭಿಷೇಕ್ ನಾಡಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರವು ಶೈಕ್ಷಣಿಕ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಅದರಲ್ಲಿ ಕಲಿಕಾ ಹಬ್ಬವು ಪ್ರಮುಖವಾಗಿದೆ. ಶಿಕ್ಷಕರು ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಸಂಸ್ಕಾರ ವನ್ನು ಕಲಿಸಿ ಕೊಡಬೇಕು, ಸಂಸ್ಕಾರ ಪಡೆಯದೆ ಇರುವ ವ್ಯಕ್ತಿ ಶಿಕ್ಷಣ ಪಡೆದರೂ ಯಾವುದೇ ಪ್ರಯೋಜನವಿಲ್ಲ ರಾಜ್ಯದಲ್ಲಿ ಸುಮಾರು ಶಾಲೆಗಳು ಮುಚ್ಚಲಾಗಿದೆ ಇದು ಅತ್ಯಂತ ಕಳವಳ ಸಂಗತಿ ಸರ್ಕಾರಿ ಶಾಲೆ ಉಳಿಸಿ ಬೆಳೆಸುವುದಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದರು.


ಈ ವೇಳೆ ಸುಡಾ ಸದಸ್ಯ ಖಾಜಾ ಮಲ್ಲಿಕ್, ಎಸ್ ಡಿ ಎಂ ಸಿ ಅಧ್ಯಕ್ಷ ಮಹಿಬೂಬ್ ಎಂ ಆರ್, ಹುಲಗಪ್ಪ ಇ.ಸಿ.ಓ, ಬಸವರಾಜ ಆನೆಗುಂದ, ಅಜೀಜ್,ಅಬಿದ್, ನೂರಖಾನ್, ಮೈನುದ್ದೀನ್, ನಾಗಪ್ಪ, ಶಾಲೆಯ ಮುಖ್ಯ ಗುರುಗಳಾದ ಜಾಕಿರ್ ಅಲಿ, ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷರಾದ ಮಾನಮ್ಮ, ಸೇರಿದಂತೆ ಶಿಕ್ಷಕರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವರದಿ:ಬಸವರಾಜ ಬುಕ್ಕನಹಟ್ಟಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ