LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಲೋಕಾಪೂರ-ಧಾರವಾಡ ನೂತನ ರೈಲ್ವೆ ಮಾರ್ಗ.! ಮರು ಸಮೀಕ್ಷೆ ಬಂದ ನಂತರ ನಿರ್ಧಾರ : ಸಂಸದ ಜಗದೀಶ್ ಶೆಟ್ಟರ್

Advertisement

ಲೋಕಾಪೂರದಿಂದ ರಾಮದುರ್ಗ ಸವದತ್ತಿ ಮಾರ್ಗವಾಗಿ ಧಾರವಾಡ ನೂತನ ರೈಲ್ವೆ ಮಾರ್ಗದ ಮರು ಸಮೀಕ್ಷೆಯ ನಂತರ ಅಗತ್ಯ ಕ್ರಮ ಕೈಗೊಳ್ಳಲು ಮನವಿ ಮಾಡಲಾಗುವುದೆಂದು ಬೆಳಗಾವಿ ಸಂಸದರಾದ ಮಾನ್ಯ ಜಗದೀಶ್ ಶೆಟ್ಟರ್ ಅವರು ತಿಳಿಸಿದರು 

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಮಿನಿ ವಿಧಾನ ಸೌಧದ ಎದುರಿನ ಕುದುರೆ ಬೈಲ ಮೈದಾನದಲ್ಲಿ ಬುಧವಾರ ಸರ್ಕಾರ ಬಾಯ್ಸ್ ವತಿಯಿಂದ ಹಮ್ಮಿಕೊಂಡಿದ್ದ ಕ್ರಿಕೆಟ್ ಟೂರ್ನಮೆಂಟ್ ಅನ್ನು ಉದ್ಘಾಟಿಸಿದ ಸಂಸದ ಜಗದೀಶ್ ಶೆಟ್ಟರ್ ರವರು ಸರ್ವ ಕ್ರೀಡಾಪಟುಗಳಿಗೆ ಶುಭ ಕೋರಿದರು. 
news_1777615082_0_132.webp

 

ನಂತರ ಮಾಧ್ಯಮ ದವರೊಂದಿಗೆ ಮಾತನಾಡಿ “ ಲೋಕಾಪೂರದಿಂದ ಧಾರವಾಡ ನೂತನ ರೈಲ್ವೆ ಮಾರ್ಗಕ್ಕಾಗಿ ಕೋವಿಡ್ ಸಂಧರ್ಭದಲ್ಲಿ ಸಮೀಕ್ಷೆ ಆಗಿತ್ತು. ಆದರೆ ಅದರಲ್ಲಿನ ಕೆಲವು ದೋಷಗಳ ಕಾರಣ ವರದಿಯು ಫಲಪ್ರದವಾಗಿಲ್ಲ. ಆದ್ದರಿಂದ ಈಗ ಲೋಕಾಪೂರದಿಂದ ಧಾರವಾಡ ನೂತನ ರೈಲ್ವೆ ಮಾರ್ಗಕ್ಕಾಗಿ ಮುರು ಸಮೀಕ್ಷೆ ಮಾಡ ಬೇಕೆಂದು ನಾನು ಈಗಾಗಲೇ ಕೇಂದ್ರ ರೈಲ್ವೆ ಸಚಿವರಿಗೆ, ರೈಲ್ವೆ ಜನರಲ್ ಮ್ಯಾನೇಜರ್ ಅವರಿಗೆ ಮನವಿ ಮಾಡಿದ್ದೇನೆ. ಇದಕ್ಕೆ ಇಬ್ಬರೂ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿ ದ್ದಾರೆ. ಮರು ಸಮೀಕ್ಷೆಯ ವರದಿಯು ಕೂಡ ಸಕಾರಾತ್ಮಕವಾಗಿ ಬಂದರೆ ರೈಲ್ವೆ ಮಾರ್ಗ ನಿರ್ಮಾಣ ಆಗೇ ಆಗುತ್ತದೆ. ಎಂದು ಹೇಳಿದರು 

ಈ ಸಂದರ್ಭದಲ್ಲಿ ಬಿಜೆಪಿ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಸೌಕರ್ಯ ಖತೀಬ್, ಪವನ ದೇಶಪಾಂಡೆ, ಮುಖಂಡರು ಸೇರಿದಂತೆ ನೂರಾರು ಯುವಕರು ಉಪಸ್ಥಿತರಿದ್ದರು.

 ವರದಿ: ಮಂಜುನಾಥ ಕಲಾದಗಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST