LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಬೊಲೆರೊ ವಾಹನಕ್ಕೆ ಲಾರಿ ಡಿಕ್ಕಿ : ಒಂದೇ ಕುಟುಂಬದ ಐವರು ಸಾವು

Advertisement

ಚಿತ್ರದುರ್ಗ: ಬೊಲೆರೊ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತ ಪ್ರಕರಣದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಿದ್ದು, ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೈರಾಪುರ ಬಳಿ ಈ ದುರಂತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 150Aದಲ್ಲಿ ಈ ಅಪಘಾತ ಸಂಭವಿಸಿದ್ದು, ಬೊಲೆರೊ ವಾಹನದಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಸ್ತೆ ಬದಿ ನಿಂತಿದ್ದ ಲಾರಿಗೆ ಬುಲೆರೊ ವಾಹನ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರೆಲ್ಲರೂ ಬಳ್ಳಾರಿ ಮೂಲದವರು. ವೆಂಕಟೇಶ್ (28), ಶಿವಮ್ಮ (25), ಮೀನಾಕ್ಷಿ (16), ಪೂಜಾ (4) ಹಾಗೂ ಒಂದೂವರೆ ವರ್ಷದ ಪರುಶುರಾಮ ಮೃತರು.

ಅಪಘಾತದಲ್ಲಿ ಗಾಯಗೊಂಡವರನ್ನು ಮೊಳಕಾಲ್ಮೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮೊಳಕಾಲ್ಮೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST