LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಊಟ ಬಿಸಾಕುತ್ತಾರೆ, ಶೂ ಬಿಚ್ಚಿಸ್ತಾರೆ : ದರ್ಶನ್ ಪಾಡು ಬಿಚ್ಚಿಟ್ಟ ವಕೀಲ

Advertisement

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಜಾಮೀನು ಪಡೆದು ಹೊರಬಂದಿದ್ದ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ಚಾಟಿ ಬೀಸಿದ್ದು, ಜಾಮೀನು ರದ್ದುಗೊಳಿಸಿ ಮತ್ತೆ ಜೈಲಿಗಟ್ಟಿದೆ.


ಈ ಮೂಲಕ ಪ್ರಕರಣದ ಎ2 ಆರೋಪಿ ನಟ ದರ್ಶನ್‌ ತೂಗುದೀಪ ಎರಡನೇ ಬಾರಿಗೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

ಹೀಗೆ ಜೈಲು ಪಾಲಾಗಿರುವ ನಟ ದರ್ಶನ್‌ ಪರ ಇಂದು ( ಸೆಪ್ಟೆಂಬರ್‌ 2 ) ವಕೀಲ ಸುನಿಲ್‌ ಕುಮಾರ್‌ ಬೆಂಗಳೂರು 57ನೇ ಸೆಷನ್ ನ್ಯಾಯಾಲಯದ ಮುಂದೆ ಜೈಲಿನಲ್ಲಿ ದರ್ಶನ್‌ ಎದುರಿಸುತ್ತಿರುವ ತೊಂದರೆಗಳನ್ನು ಬಿಚ್ಚಿಟ್ಟಿದ್ದಾರೆ.

ದರ್ಶನ್‌ಗೆ ಹೆಚ್ಚುವರಿ ದಿಂಬು ಹಾಗೂ ಹಾಸಿಗೆಯನ್ನು ನೀಡಬೇಕೆಂದು ಅರ್ಜಿ ಸಲ್ಲಿಸಿದ್ದ ವಕೀಲರು ಜೈಲಿನಲ್ಲಿ ದರ್ಶನ್‌ಗೆ ಊಟ ಬಿಸಾಕುತ್ತಿದ್ದಾರೆ, ಶೂ ಹಾಕಿಕೊಂಡರೆ ಅದನ್ನೂ ಸಹ ತೆಗೆಸುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಅಲ್ಲದೇ ಕಾಂಡಿಮೆಂಟ್ಸ್‌ಗೂ ಸಹ ಹಣ ನೀಡಲು ಬಿಡುತ್ತಿಲ್ಲ, ಜೈಲಿನ ಅಧಿಕಾರಿಗಳು ಕನಿಷ್ಟ ಸೌಲಭ್ಯವನ್ನು ನೀಡಬೇಕೆಂದು ನ್ಯಾಯಾಲಯದ ಮುಂದೆ ಬೇಡಿಕೆ ಇಟ್ಟಿದ್ದಾರೆ.

ಈ ಮೂಲಕ ಜೈಲಿನಲ್ಲಿ ದರ್ಶನ್‌ ಪಡುತ್ತಿರುವ ಪಾಡನ್ನು ವಕೀಲರು ಬಿಚ್ಚಿಟ್ಟಿದ್ದಾರೆ. ನಾವು ಕೇಳುತ್ತಿರುವುದು ಮೂಲಭೂತ ಬೇಡಿಕೆ, ಹೀಗಾಗಿ ಜೈಲಧಿಕಾರಿಗಳು ಇದನ್ನು ಕೊಡಲೇಬೇಕು ಎಂದು ವಾದ ಮಾಡಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ