LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಸ್ಟಾಪ್ ನರ್ಸ್ ನಿಂದ ಹೆರಿಗೆ : ಬಾಣಂತಿ, ಮಗು ಸಾವು

Advertisement
ರಾಯಚೂರು : ರಾಜ್ಯದಲ್ಲಿ ಮತ್ತೊಂದು ಘೋರ ಘಟನೆ ನಡೆದಿದ್ದು, ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಬಾಣಂತಿ, ಮಗು ಸಾವನ್ನಪ್ಪಿದ ಘಟನೆ ನಡೆದಿದೆ.

ರಾಯಚೂರು ಜಿಲ್ಲೆ ದೇವದುರ್ಗ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಅರಕೇರಾ ತಾಲೂಕಿನ ಭೋಗಿ ರಾಮನಗುಂಡ ಗ್ರಾಮದ ಶಿವಮ್ಮ(29) ಮತ್ತು ಅವರ ಶಿಶು ಮೃತಪಟ್ಟಿದೆ.

ಗರ್ಭಿಣಿ ಶಿವಮ್ಮ ಪ್ರತಿ ತಿಂಗಳು ದೇವದುರ್ಗ ಸಾರ್ವಜನಿಕ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಳ್ಳುತ್ತಿದ್ದರು. ಹೆರಿಗೆ ನೋವು ಹೆಚ್ಚಾಗಿದ್ದರಿಂದ ಸ್ಟಾಪ್ ನರ್ಸ್ ಹೆರಿಗೆ ಮಾಡಿಸಲು ಮುಂದಾಗಿದ್ದಾರೆ.

ಈ ವೇಳೆ ತೀವ್ರ ರಕ್ತಸ್ರಾವವಾಗಿದ್ದು, ವೈದ್ಯರಿಗೆ ಮಾಹಿತಿ ನೀಡಿದ್ದು, ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಶಿವಮ್ಮ ಅವರನ್ನು ಕಳುಹಿಸಿದ್ದಾರೆ.

ಆದರೆ ತೀವ್ರ ರಕ್ತಸ್ರಾವದಿಂದ ಮಾರ್ಗಮಧ್ಯದಲ್ಲಿ ತಾಯಿ, ಮಗು ಮೃತಪಟ್ಟಿದ್ದಾರೆ.ದೇವದುರ್ಗ ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯವೇ ಬಾಣಂತಿ ಸಾವಿಗೆ ಕಾರಣವೆಂದು ಮೃತರ ಸಹೋದರ ಆರೋಪಿಸಿದ್ದಾರೆ.

ಚಿಕಿತ್ಸೆಗೆ ಸ್ಪಂದಿಸದೆ ಶಿವಮ್ಮ ಮೃತಪಟ್ಟಿದ್ದಾರೆ. ನಾನು ಆಸ್ಪತ್ರೆಯಲ್ಲಿ ಇರಲಿಲ್ಲ. ಆಂತರಿಕ ತನಿಖೆ ನಡೆಸಿದ್ದು, ಜಿಲ್ಲಾ ಆರೋಗ್ಯ ಅಧಿಕಾರಿಗೆ ವರದಿ ನೀಡಲಾಗುವುದು ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ಬನದೇಶ್ವರ ತಿಳಿಸಿದ್ದಾರೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ