LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಮಸಿ ಬಳಿದ ಕಿಡಿಗೇಡಿಗಳು

Advertisement
ಬೆಳಗಾವಿ: ಸಮೀಪದ ಮಚ್ಚೆ ಗ್ರಾಮದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಗುರುವಾರ ರಾತ್ರಿ ಕಿಡಿಗೇಡಿಗಳು ಮಸಿ ಬಳಿದಿದ್ದಾರೆ. ಇದರಿಂದ ಸ್ಥಳದಲ್ಲಿ ಕೆಲಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಯಿತು.

ಮೊದಲಿದ್ದ ರಾಯಣ್ಣ ಮೂರ್ತಿಗೆ ಕಪ್ಪು ಬಣ್ಣವೇ ಇತ್ತು.ಅದರ ಮೇಲೆಯೇ ಮತ್ತೆ ಕರಿ ಮಸಿ ಸುರಿದಿದ್ದಾರೆ. ಹೀಗಾಗಿ, ಕೆಲಕಾಲ ಯಾರೂ ಇದನ್ನು ಗಮನಿಸಿರಲಿಲ್ಲ. ರಾತ್ರಿ ಗ್ರಾಮದ ಕೆಲವು ಯುವಕರ ಗಮನಕ್ಕೆ ಬಂದಿದೆ. ಕೆಲವೇ ನಿಮಿಷಗಳಲ್ಲಿ ಹಲವರು ಸ್ಥಳದಲ್ಲಿ ಸೇರಿ ಘೋಷಣೆ ಕೂಗಿದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಭದ್ರತಾ ಕ್ರಮ ಕೈಗೊಂಡರು.

ನಗರ ಪೊಲೀಸ್‌ ಕಮಿಷನರ್‌ ಭೂಷಣ ಬೊರಸೆ, ಡಿಸಿಪಿ ನಾರಾಯಣ ಭರಮನಿ ಕೂಡ ಸ್ಥಳಕ್ಕೆ ಧಾವಿಸಿದರು. ಅವರಿಗೆ ಸುತ್ತುವರಿದ ಜನ, ಕೂಡಲೇ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST