LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಎಂ.ಕೆ. ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು : ಸುಪ್ರೀಂ ಕೋರ್ಟ್ ಆದೇಶ

Advertisement

ಬೆಂಗಳೂರು: ವಿಧಾನ ಪರಿಷತ್ (Vidhana Parishad )ಉಪಸಭಾಪತಿ ಎಂ.ಕೆ. ಪ್ರಾಣೇಶ್ (Pranesh ) ಅವರ ಪರಿಷತ್ ಸದಸ್ಯತ್ವವನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ಆದೇಶ ಹೊರಡಿಸಿದೆ.

ಈ ಹಠಾತ್ ಬೆಳವಣಿಗೆಯು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಹೊಸ ರಾಜಕೀಯ ಮೇಲಾಟಕ್ಕೆ ಕಾರಣವಾಗಿದೆ.

ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಚುನಾವಣೆ ನಡೆದ ಸಂದರ್ಭದಲ್ಲಿ, ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಹೈಕೋರ್ಟ್ ಈ ಹಿಂದೆ ಮಹತ್ವದ ತೀರ್ಪು ನೀಡಿತ್ತು. ಹೈಕೋರ್ಟ್‌ನ ಈ ತೀರ್ಪನ್ನು ಪ್ರಶ್ನಿಸಿ ಎಂ.ಕೆ. ಪ್ರಾಣೇಶ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಆದರೆ ಈ ಕಾನೂನು ಹೋರಾಟದಲ್ಲಿ ಗಾಯತ್ರಿ ಶಾಂತೇಗೌಡ ಅವರಿಗೆ ಮೇಲುಗೈಯಾಗಿದ್ದು, ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಇಂದು ಎಂ.ಕೆ. ಪ್ರಾಣೇಶ್ ಅವರ ವಿಧಾನ ಪರಿಷತ್ ಸದಸ್ಯತ್ವವನ್ನು ರದ್ದುಗೊಳಿಸಿ ಅಂತಿಮ ಆದೇಶ ಪ್ರಕಟಿಸಿದೆ. ಈ ಆದೇಶದ ಬೆನ್ನಲ್ಲೇ ಕರಾವಳಿ ಮತ್ತು ಮಲೆನಾಡು ಭಾಗ ಸೇರಿದಂತೆ ರಾಜ್ಯ ಬಿಜೆಪಿಗೆ ದೊಡ್ಡ ಹಿನ್ನಡೆಯಾದಂತಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST