LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
International News

ಸ್ವೀಡನ್ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದುಕೊಂಡ ಮೋದಿ : ಪ್ರಧಾನಿಗೆ 31 ಪ್ರಶಸ್ತಿ ಗರಿ 

Advertisement

ಸ್ವಿಡನ್ ಪ್ರವಾಸದಲ್ಲಿರುವ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಅಪರೂಪದ ಹಾಗೂ ಅತ್ಯುನ್ನತ ಗೌರವ ಲಭಿಸಿದೆ.

ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸುವಲ್ಲಿ ಅವರು ಮಾಡಿದ ಮಹತ್ತರವಾದ ಕೊಡುಗೆಯನ್ನು ಗುರುತಿಸಿ, ಸ್ವೀಡನ್ ಸರ್ಕಾರವು ಮೋದಿ ಅವರಿಗೆ ತನ್ನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

'ರಾಯಲ್ ಆರ್ಡರ್ ಆಫ್ ದಿ ಪೋಲಾರ್ ಸ್ಟಾರ್, ಕಮಾಂಡರ್ ಗ್ರಾಂಡ್ ಕ್ರಾಸ್' (Royal Order of the Polar Star, Commander Grand Cross) ಹೆಸರಿನ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಮೋದಿ ಅವರಿಗೆ ಪ್ರದಾನ ಮಾಡಲಾಯಿತು. 

ಜಾಗತಿಕ ವೇದಿಕೆಯಲ್ಲಿ ಭಾರತದ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದ ಮೋದಿ ಅವರಿಗೆ ಲಭಿಸಿದ ಈ ಪ್ರಶಸ್ತಿಯ ಬಗ್ಗೆ ಪ್ರತಿಯೊಬ್ಬರೂ ಅಪಾರ ಹೆಮ್ಮೆ ಪಡುತ್ತಿದ್ದಾರೆ.

ವಿದೇಶಿ ಗಡ್ಡದ ಮೇಲೆ ನಮ್ಮ ಪ್ರಧಾನಿಗೆ ಇಂತಹ ಮಹಾನ್ ಗೌರವ ಸಿಕ್ಕಿರುವುದು ದ್ವಿಪಕ್ಷೀಯ ಸ್ನೇಹ ಸಂಬಂಧಕ್ಕೆ ಪ್ರತೀಕವಾಗಿದೆ.

ವಿವಿಧ ಕ್ಷೇತ್ರಗಳಲ್ಲಿ ಭಾರತವು ಪ್ರಭಾವಶಾಲಿಯಾಗಿ ಬೆಳೆಯುತ್ತಿರುವ ರೀತಿಯನ್ನು ಸ್ವೀಡನ್ ನಾಯಕತ್ವವು ವಿಶೇಷವಾಗಿ ಶ್ಲಾಘಿಸಿದೆ.

ಮೋದಿ ಅವರ ಅದ್ಭುತ ನಾಯಕತ್ವದಲ್ಲಿ ಭಾರತ ಸಾಧಿಸಿದ ಪ್ರಗತಿಯನ್ನು ಕೊಂಡಾಡುತ್ತಾ ಸ್ವೀಡನ್ ಸರ್ಕಾರ ಈ ಅತ್ಯುನ್ನತ ಪ್ರಶಸ್ತಿಯನ್ನು ನೀಡಿದೆ.

ತನಗೆ ಈ ಅತ್ಯುನ್ನತ ಪ್ರಶಸ್ತಿಯನ್ನು ಪ್ರದಾನ ಮಾಡಿದ ಸ್ವೀಡನ್ ಸರ್ಕಾರ ಮತ್ತು ಅಲ್ಲಿನ ಜನತೆಗೆ ಪ್ರಧಾನಿ ಮೋದಿ ವಿಶೇಷ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಈ ಪ್ರಶಸ್ತಿ ಕೇವಲ ತನಗಷ್ಟೇ ಸೀಮಿತವಲ್ಲ, ಇದು 140 ಕೋಟಿ ಭಾರತೀಯರಿಗೆ ಸಂದ ಗೌರವ ಎಂದು ಅವರು ಈ ಸಂದರ್ಭದಲ್ಲಿ ಬಣ್ಣಿಸಿದ್ದಾರೆ.

 ಈ ಪ್ರತಿಷ್ಠಿತ ರಾಯಲ್ ಆರ್ಡರ್ ಆಫ್ ದಿ ಪೋಲಾರ್ ಸ್ಟಾರ್ ಪ್ರಶಸ್ತಿಯೂ ಸೇರಿದಂತೆ ಪ್ರಧಾನಿ ಮೋದಿ ಅವರು ಇದುವರೆಗೆ ಪಡೆದಿರುವ ಒಟ್ಟು ಅಂತರರಾಷ್ಟ್ರೀಯ ಪ್ರಶಸ್ತಿಗಳ ಸಂಖ್ಯೆ ಬರೋಬ್ಬರಿ 31ಕ್ಕೆ ಏರಿದೆ. ಇದುವರೆಗೆ ಯಾವುದೇ ಭಾರತೀಯ ಪ್ರಧಾನಿಗೂ ಸಿಗದ ಅಪರೂಪದ ದಾಖಲೆ ಇದಾಗಿದೆ ಎಂಬುದು ಗಮನಾರ್ಹ.

ಹಿಂದೆ ಫ್ರಾನ್ಸ್, ರಷ್ಯಾ, ಅಮೇರಿಕಾ, ಭೂತಾನ್ ನಂತಹ ಹಲವು ದೇಶಗಳು ಪ್ರಧಾನಿ ಮೋದಿ ಅವರಿಗೆ ತಮ್ಮ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ನೀಡಿ ಅತ್ಯಂತ ವೈಭವದಿಂದ ಗೌರವಿಸಿದ್ದವು. ಇದೀಗ ಆ ಅಪರೂಪದ ಪಟ್ಟಿಗೆ ಸ್ವೀಡನ್ ದೇಶವೂ ಅಧಿಕೃತವಾಗಿ ಸೇರ್ಪಡೆಯಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ