LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಾಳೆ ಕೋಲಾರದಲ್ಲಿ ಮೋದಿಯಿಂದ ಲಘು ಹೆಲಿಕಾಪ್ಟರ್ ಘಟಕ ಉದ್ಘಾಟನೆ 

Advertisement
ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್ ನಲ್ಲಿ ಟಾಟಾ ಏರ್ ಬಸ್ ಲಘು ಹೆಲಿಕಾಪ್ಟರ್ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರಾನ್ ಅವರು ಮಂಗಳವಾರ ವರ್ಚುಯಲ್ ಮೂಲಕ ಉದ್ಘಾಟಿಸಲಿದ್ದಾರೆ.

ಅದೇ ದಿನ ರಕ್ಷಣಾ ಸಚಿವ ರಾಜನಾಥ ಸಿಂಗ್ ಮತ್ತು ಫ್ರಾನ್ಸ್ ರಕ್ಷಣಾ ಸಚಿವ ಕ್ಯಾಥರಿನ್ ವಾಟ್ರಿನ್ ಅವರು ಬೆಂಗಳೂರಿನಲ್ಲಿ ಹಮ್ಮರ್ ಕ್ಷಿಪಣಿ ಸೇರಿ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ.ಈ ವೇಳೆ ಹಲವು ರಕ್ಷಣಾ ಸಹಕಾರ ಒಪ್ಪಂದಗಳಿಗೆ ಸಹಿ ಹಾಕಲಾಗುವುದು.

ರಕ್ಷಣಾ ಇಲಾಖೆಯಿಂದ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಲಾಗಿದೆ. ಉಭಯ ದೇಶಗಳ ನಡುವಿನ ರಕ್ಷಣಾ ಸಹಕಾರ ಒಪ್ಪಂದವನ್ನು ಇನ್ನೂ ಹತ್ತು ವರ್ಷ ವಿಸ್ತರಿಸುವ ಮತ್ತು ಹಮ್ಮರ್ ರಕ್ಷಣಾ ಕ್ಷಿಪಣಿಯ ಜಂಟಿ ತಯಾರಿಕೆ ಸೇರಿದಂತೆ ಹಲವು ರಕ್ಷಣಾ ಒಪ್ಪಂದಗಳಿಗೆ ಉಭಯ ನಾಯಕರು ಸಹಿ ಹಾಕುವ ಸಾಧ್ಯತೆ ಇದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST